ರೈತರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮವಹಿಸಿ: ಹೆಚ್.ಪಿ. ಸ್ವರೂಪ್

0

ಸರ್ಕಾರಿ ಕಚೇರಿಗಳಿಗೆ ಬರುವ ರೈತರಿಗೆ ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಿ ಅವರ ಕೆಲಸಗಳನ್ನು ಇನ್ನಷ್ಟು ತ್ವರಿತವಾಗಿ ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಹೆಚ್.ಪಿ. ಸ್ವರೂಪ್ ಸೂಚಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಸಮಾನ್ಯ ಸ್ಥಾಯಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೊವಿಡ್-19 ನಿಯಂತ್ರಣದ ದೃಷ್ಟಿಯಿಂದ ಜಿಲ್ಲೆಯಲ್ಲಿ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಕೊರೋನಾ ಪರೀಕ್ಷೆಗಳನ್ನು ನಡೆಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್, ಸ್ಥಾಯಿ ಸಮಿತಿ ಸದಸ್ಯರುಗಳಾದ ಸುಪ್ರದೀಪ್ ಯಜಮಾನ್, ಹನುಮೇಗೌಡರು, ಪುಷ್ಪ ದರ್ಶನ್ ಬಾಬು, ಹನುಮೇಗೌಡರು, ಮಮತಾ ರಮೇಶ್, ಲತಾ ದಿಲೀಪ್, ಮಂಜಪ್ಪ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.

Advertisements

LEAVE A REPLY

Please enter your comment!
Please enter your name here