ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಶಕ್ತಿ ವೃದ್ದಿಸಿಕೊಳ್ಳಲು ಸಾದ್ಯ : ಜಿಲ್ಲಾಧಿಕಾರಿ

0

ಕ್ರೀಡೆಯು ದೈಹಿಕ ಹಾಗೂ ಮಾನಸಿಕ ಶಕ್ತಿಯನ್ನು ವೃದ್ದಿಸಿಕೊಳ್ಳಲು ಸಹಕಾರಿ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದ್ದಾರೆ.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ವತಿಯಿಂದ ಏರ್ಪಡಿಸಿದ್ದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ದೆಗಳನ್ನ ಉದ್ಘಾಟಿಸಿ ಮಾತನಾಡಿದ ಅವರು ಪ್ರತಿಯೊಬ್ಬರು ಕ್ರೀಡಾ ಮನೋಭಾವವನ್ನು ಬೆಳೆಸಿಕೊಂಡು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಿ ಎಂದು ಅವರು ಹೇಳಿದರು.

ಕ್ರೀಡೆಯಿಂದ ನಮ್ಮ ಆರೋಗ್ಯವನ್ನು ಉತ್ತಮವಾಗಿಟ್ಟುಕೊಂಡು ಸದೃಡರಾಗಲು ಇರುವ ಅತ್ಯುತ್ತಮ ಮಾರ್ಗ ಜಿಲ್ಲೆಯಲ್ಲಿ ದುರಸ್ಥಿಯಲ್ಲಿದ್ದ ಈಜುಕೊಳವನ್ನು ಸರಿಪಡಿಸಿದ್ದು ಕ್ರೀಡಾಪಟುಗಳು ಅದರ ಸದುಪಯೋಗ ಪಡಿಸಿಕೊಂಡು ಹೆಚ್ಚು ಹೆಚ್ಚು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಶಾಸಕರಾದ ಪ್ರೀತಂ ಜೆ. ಗೌಡ ಅವರು ಮಾತನಾಡಿ ಹಾಸನದಲ್ಲಿ ರಾಜ್ಯದಲ್ಲಿ ಅತೀ ದೊಡ್ಡ ಕ್ರೀಡಾಂಗಣ ಪ್ರದೇಶವಿದೆ ಮಾಜಿ ಪ್ರಧಾನಿ ದೇವೆಗೌಡ ಅವರ ಪ್ರಯತ್ನದ ಫಲವಾಗಿ ಬಂದಿದೆ 8 ಕೋಟಿ ಜೊತೆಗೆ ಇನ್ನಷ್ಟು ಹೆಚ್ಚಿನ ಹಣವನ್ನು ತಂದು ಸಿಂಥೆಟಿಕ್ ಟ್ರ್ಯಾಕ್ ಟರ್ಫ್ ಗ್ರೌಂಡ್ ಹಾಗೂ ಫುಟ್ ಬಾಲ್ ಕ್ರೀಡಾಂಗಣ ಮತ್ತಿತರ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು. ದಿನ ನಿತ್ಯ ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಡರಾಗಬಹುದು ಎಂದರು.

ಮುಂದಿನ ದಿನಗಳಲ್ಲಿ ಎಲ್ಲರೂ ತಮ್ಮನ್ನು ತಾವು ಇನ್ನೂ ಹೆಚ್ಚೆಚ್ಚು ಕ್ರೀಡೆಯಲ್ಲಿ ತೊಡಗಿಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ ಎಂದು ತಿಳಿಸಿದರು.

ಬೇಲೂರು ಶಾಸಕರಾದ ಕೆ.ಎಸ್ ಲಿಂಗೇಶ್ ಅವರು ಮಾತನಾಡಿ ದೇಶದಲ್ಲಿ ಜನಸಂಖ್ಯೆ ಹೆಚ್ಚಿದ್ದರು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ನಮ್ಮ ಸಾಧನೆ ಇನ್ನು ತೃಪ್ತಿಕರವಾಗಿಲ್ಲ ಹಾಗಾಗಿ ಈಗಿಂದಲೇ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಶಾಸಕರು ಹೇಳಿದರು.ನಾವು ಯಾವುದೋ ಒಂದು ದಿನದ ಮಟ್ಟಿಗೆ ಕ್ರೀಡೆಗೆ ಸಿಮೀತರಾಗದೆ ದಿನ ನಿತ್ಯ ಕ್ರೀಡೆಯಲ್ಲಿ ತೊಡಗಿಸಿಕೊಂಡು ಸದೃಡರಾಗೋಣ ಎಂದರು.

ಕ್ರೀಡೆಯು ದೈಹಿಕ, ಮಾನಸಿಕ, ಹಾಗೂ ಆರೋಗ್ಯಕ್ಕೆ ತುಂಬಾ ಸಹಕಾರಿಯಾಗುತ್ತದೆ ಎಂದರಲ್ಲದೆ ಕ್ರೀಡಾಪಟುಗಳು ಹೆಚ್ಚಾಗಿ ಕ್ರೀಡೆಯಲ್ಲಿ ತೊಡಗಿಕೊಂಡು ಉನ್ನತ ಮಟ್ಟಕ್ಕೆ ಬೆಳೆದು ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಿ ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಿ. ಭಾರತಿ ಅವರು ಮಾತನಾಡಿ ಕ್ರೀಡೆಯು ನಮ್ಮ ದೈನಂದಿನ ಕೆಲಸದಲ್ಲಿ ದಕ್ಷತೆ ಹಾಗೂ ಕಾರ್ಯ ಕ್ಷಮತೆ ಹೆಚ್ಚಿಸಲು ಸಹಕಾರಿಯಾಗುತ್ತದೆ. ಎಲ್ಲರೂ ಎಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಿ ಅದರಿಂದ ಸಿಗುವ ಅನುಕೂಲಗಳನ್ನು ಪಡೆದುಕೊಳ್ಳಿ ಎಂದರು.

ಕ್ರೀಡೆಯು ಹಲವಾರು ಖಾಯಿಲೆಗಳನ್ನು ವಾಸಿ ಮಾಡುವಂತಹ ಶಕ್ತಿಯನ್ನು ಹೊಂದಿದ್ದು ಜೊತೆಗೆ ಮಾನಸಿಕ ಶಕ್ತಿಯು ಕೂಡ ಬೆಳೆಸಿಕೊಳ್ಳಬಹುದು ಎಂದು ಅವರು ಹೇಳಿದರು.

ಜಿಲ್ಲಾ ನೌಕರರ ಸಂಘದ ಅಧ್ಯಕ್ಷರಾದ ಕೃಷ್ಣೆಗೌಡ ಅವರು ಮತನಾಡಿ ಎಲ್ಲರ ಆರೋಗ್ಯ ಉತ್ತಮವಾಗಿರಬೇಕೆಂದರೆ ಕ್ರೀಡೆಯಿಂದ ಮಾತ್ರ ಸಾಧ್ಯ ಹಾಗಾಗಿ ಎಲ್ಲರೂ ಕೂಡ ಕ್ರೀಡೆಯಲ್ಲಿ ಭಾಗವಹಿಸಿ ಅದರ ಉಪಯೋಗವನ್ನು ಪಡೆದುಕೊಳ್ಳಿ ಎಂದರು.
ಎಲ್ಲರೂ ತಮ್ಮ ಮಕ್ಕಳನ್ನು ಕ್ರೀಡೆಯ ಕಡೆ ಕರೆತಂದು ಅವರಿಗೆ ಸಿಗುವ ಮನರಂಜನೆಯನ್ನು ದೊರಕಿಸಿಕೊಡಿ ಎಂದರು.

ಇದೇ ವೇಳೆ ಜಿಲ್ಲಾ ನೌಕರರ ಸಂಘದ ವತಿಯಿಂದ ಕೊರೋನ ಸಂದರ್ಭದಲ್ಲಿ ಸೇವೆ ಸಲ್ಲಿಸಿದಂತಹ ಅಧಿಕಾರಿ ವರ್ಗದವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಹಿಮ್ಸ್ ನಿರ್ದೆಶಕರಾದ ಡಾ|| ರವಿಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ|| ಕೃಷ್ಣಮೂರ್ತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ವಿನೋದ್ ಚಂದ್ರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಂಜುನಾಥ್, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಿರ್ದೇಶಕರಾದ ಸಿ.ಕೆ.ಹರೀಶ್, ಕ್ರೀಡಾ ಕಾರ್ಯದರ್ಶಿ ರಘು ಹಾಗೂ ಲಕ್ಷ್ಮಿಕಾಂತ್ ಬಿ.ಎಂ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಗೌರವಾಧ್ಯ್ಯಕ್ಷರಾದ ರುದ್ರಪ್ಪ, ರಾಜ್ಯ ಪರಿಷತ್ ಸದಸ್ಯರಾದ ಪ್ರದೀಪ್ ಕುಮಾರ್ ಎನ್ ಹಾಗೂ ಸತ್ಯನಾರಾಯಣ ಬಿ.ಕೆ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here