ರಾಜ್ಯ ಸೇರಿ ಹಾಸನ ಜಿಲ್ಲೆಯಾದ್ಯಂತ ವಿವಿಧ ಬೇಡಿಕೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಪ್ರತಿಭಟನೆ

0

ಹಾಸನ / ಸಕಲೇಶಪುರ : ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ
ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು

ಅರಸೀಕೆರೆ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಗರದಲ್ಲಿ ಮೆರವಣಿಗೆ ನಡೆಸಿದರು.
ಸಕಲೇಶಪುರದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸೋಮವಾರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಿ ಸಿಡಿಪಿಒ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಿದರು
ಅರಕಲಗೂಡು: ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಸಿಡಿಪಿಒ ಹರಿಪ್ರಸಾದ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು,  ಅಂಗನವಾಡಿ ಸಹಾಯಕರ ಬೇಡಿಕೆ ಗಳನ್ನು ಈಡೇರಿಸುವಂತೆ ಈ ತಿಂಗಳ 3ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೆವು, ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಸರಕಾರದ ಸಚಿವರು ಪ್ರತಿನಿಧಿಗಳು ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಭರವಸೆ ನೀಡಿದ್ದರಿಂದ ಪ್ರತಿಭಟನೆಯನ್ನು ಹಿಂಪಡೆದಿದ್ದೆವು. ಸರಕಾರ ಕೇವಲ ಕಣ್ಣೊರುಸುವ ತಂತ್ರದಿಂದಾಗಿ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ

ಬೇಲೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಲ್ಲಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ ಆವರಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಕೈಗೆ ಕಪ್ಪುಬಟ್ಟೆ ಹಾಗೂ ಕುತ್ತಿಗೆಗೆ ಹೂವಿನ ಮಾಲೆ ಹಾಕಿಿಕೊಂಡು ಉಪವಾಸ ಸತ್ಯಾಗ್ರಹ ನಡೆಸಿದರು.

ಪೊಳ್ಳು ಭರವಸೆ ನೀಡಿದ್ದಲ್ಲದೆ ಯಾವುದೇ ರೀತಿಯ ಬರವಸೆಯನ್ನು ಈಡೇರಿಸಲು ಪ್ರಯತ್ನಿಸಲಿಲ್ಲ ಈ ಕಾರಣಕ್ಕಾಗಿ ಇಂದು(ಮಾ.15) ರಾಜ್ಯದ ಪ್ರತಿ ತಾಲೂಕು ಕೇಂದ್ರದಲ್ಲಿ ಒಂದು ದಿನದ ಸಾಂಕೇತಿಕ ಉಪವಾಸ ಸತ್ಯಾಗ್ರಹ ಹಾಗೂ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು. ರಾಜ್ಯಸರಕಾರ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕರಿಗೆ ಬಿಡಿಗಾಸನ್ನು ಕೊಡದೆ ಅನ್ಯಾಯ ಮಾಡಿದೆ ಇಲಾಖೆಯೂ ಶಿಫಾರಸು ಮಾಡಿರುವ ಬೇಡಿಕೆಗಳನ್ನು ಈಡೇರಿಸುವವರೆಗೂ ಇಲಾಖೆ ಕೊಡುವ ಯಾವುದೇ ವರದಿಗಳನ್ನು ಸಲ್ಲಿಸುವುದಿಲ್ಲ ಎಂದು ಹೇಳಿದರು.
ಸರಕಾರ ಕೂಡಲೆ ಮಾಸಿಕ ಪಿಂಚಣಿ ಸೌಲಭ್ಯ ಉಚಿತ ವೈದ್ಯಕೀಯ ಸೌಲಭ್ಯ ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ-ಯುಕೆಜಿ ಪ್ರಾರಂಭಿಸುವುದು, ಅಂಗನವಾಡಿ ಕೇಂದ್ರಕ್ಕೆ ಸಹಾಯಕರನ್ನು  ನೇಮಕ ಮಾಡುವುದು ಕಾರ್ಯಕರ್ತರಿಗೆ ಗೌರವಧನ ಅಂತರವನ್ನು ಕಮ್ಮಿ ಮಾಡುವುದು ಈ ಎಲ್ಲಾ ಬೇಡಿಕೆಗಳನ್ನು ಸರಕಾರ  ಮುಂದಿನ 15ರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳುತ್ತೇವೆ ಎಂದು ಹೇಳಿದರು.

LEAVE A REPLY

Please enter your comment!
Please enter your name here