ಜಿಲ್ಲೆಯಲ್ಲಿಂದು (ಮಾ1) ಹೊಸದಾಗಿ 4 ಕೋವಿಡ್ ಪ್ರಕರಣಗಳು ಪತ್ತೆ : ಜಿಲ್ಲಾಸ್ಪತ್ರೆಯಲ್ಲಿ 71 ಮಂದಿ ಸಕ್ರಿಯ ಸೋಂಕಿತರು ಮಾತ್ರ ಹಾಲಿ ಚಿಕಿತ್ಸೆ | ಹೆಚ್ಚಿನ ಮಾಹಿತಿ |👇

0

ಹಾಸನ ಮಾ.1 (ಹಾಸನ್_ನ್ಯೂಸ್ !, ಜಿಲ್ಲೆಯಲ್ಲಿಂದು ಹೊಸದಾಗಿ 4 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 28,734 ಏರಿಕೆಯಾಗಿದೆ. ಆದರೆ ಜಿಲ್ಲಾಸ್ಪತ್ರೆಯಲ್ಲಿ 71 ಮಂದಿ ಸಕ್ರಿಯ ಸೋಂಕಿತರು ಮಾತ್ರ ಹಾಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 28,196 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 2 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 467 ಮಂದಿ ಸಾವನ್ನಪ್ಪಿದಾರೆ.

Advertisements

ಇಂದು ಪತ್ತೆಯಾದ 4 ಕೋವಿಡ್ ಪ್ರಕರಣಗಳಲ್ಲಿ ಹಾಸನ ತಾಲ್ಲೂಕಿನಲ್ಲಿ 2 ಚನ್ನರಾಯಪಟ್ಟಣ ಹಾಗೂ  ಸಕಲೇಶಪುರ ತಾಲ್ಲೂಕಿನಲ್ಲಿ ತಲಾ ಒಬ್ಬರಿಗೆ   ಕೋವಿಡ್ ದೃಡಪಟ್ಟಿದೆ ಎಂದು  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here