ಡಿ.ಎಸ್.ಟಿ – ಪಿ ಹೆಚ್ .ಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

0

ಡಿ.ಎಸ್.ಟಿ –  ಪಿ ಹೆಚ್ .ಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
ಹಾಸನ ಜ.20 (ಹಾಸನ್_ನ್ಯೂಸ್ !, ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಡಿ ಎಸ್ ಟಿ   ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ ಹೆಚ್ .ಡಿ .ಸಂಶೋಧನೆಗೆ ಕರ್ನಾಟಕ ಡಿ.ಎಸ್.ಟಿ –  ಪಿ ಹೆಚ್ .ಡಿ ಶಿಷ್ಯವೇತನ” ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಅನುಷ್ಠಾನಗೊಳಿಸುತ್ತಿದೆ.
     2020-21ನೇ ಸಾಲಿನಲ್ಲಿ ಸದರಿ ಯೋಜನೆಯಡಿ  ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆ ಕಾಲೇಜುಗಳಲ್ಲಿ  ಈಗಾಗಲೇ ಪಿ ಹೆಚ್ .ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
ಆನ್‍ಲೈನ್ ಮೂಲಕ ಅರ್ಜಿಗಳನ್ನು ಫೆ.10 ರಂದು ಸಂಜೆ 5.00  ಒಳಗೆ ಸಲ್ಲಿಸಬಹುದಾಗಿದೆ
         ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಗಾಗಿ
http://ksteps.karnataka.gov.in ವೆಬ್ ಸೈಟ್ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ವ್ಯವಸ್ಥಾಪಕ  ನಿರ್ದೇಶಕರು ತಿಳಿಸಿದ್ದಾರೆ.

Advertisements

LEAVE A REPLY

Please enter your comment!
Please enter your name here