ಹೆಚ್ಚು ಹಣ ಪಡೆದ ಖಾಸಗಿ ಆಸತ್ಪೆಗಳಿಗೆ ಕೆ-ಪಿ-ಎಂ-ಇ ಕಾಯ್ದೆಯಡಿ ಕಠಿಣ ಕ್ರಮ

0

ಹಾಸನ ನಗರದ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರದ ಮಾರ್ಗಸೂಚಿಯನ್ನು ಅನುಸರಿಸದೆ ಕೋವಿಡ್ ಚಿಕಿತ್ಸೆಗೆ ಹೆಚ್ಚಿನ ಹಣ ಪಡೆಯುತ್ತಿದ್ದಾರೆ ಅಂತಹ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆರ್ ಗಿರೀಶ್ ಅವರು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಂಗಣದಲ್ಲಿಂದು ಕೋವಿಡ್ ನಿಯಂತ್ರಣ ಕುರಿತು ವೈದ್ಯರಗಳೊಂದಿಗೆ ತಜ್ಞರ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಈಗಾಗಲೇ 5 ಬ್ಲಾಕ್ ಪಂಗಸ್ ಪ್ರಕರಣ ವರದಿಯಾಗಿದ್ದುಇದರ ಬಗ್ಗೆ ಆತಂಕ ಪಡುವುದು ಬೇಡ ಆದರೆ ಹೆಚ್ಚು ವ್ಯಾಪಕವಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳಿ ಎಂದ ಅವರು ಆಮ್ಲಜನಕ ನಿರ್ವಹಣೆ , ರೆಮ್ ದಿಸಿವರ್ ಚುಚ್ಚುಮದ್ದುಗಳನ್ನು ಬಳಕೆ ವೇಳೆ ಗರಿಷ್ಠ ಕಾಳಜಿ ವಹಿಸಿ ಎಂದರು .

ಸರ್ಕಾರದ ಮಾರ್ಗಸೂಚಿಯಂತೆ ಆಮ್ಲಜನಕದ ನಿರ್ವಹಣೆಯಲ್ಲಿ ಹೆಚ್ಚಿನ ಗಮನಹರಿಸಬೇಕು ಆಸ್ಪತ್ರ್ರೆಗಳು ಪ್ರತಿ ವಾರ್ಡ್ ಗಳಲ್ಲಿ ತಂಡವನ್ನು ರಚಿಸಿ ಆಮ್ಲಜನಕವನ್ನು ಬಳಕೆ ಮಾಡಬೇಕು ಎಂದು ತಿಳಿಸಿದರು.

ಮೃತದೇಹ ಸಾಗಿಸುವಲ್ಲಿ ಖಾಸಗಿ ಆಸ್ಪತ್ರೆಗಳು ಹೆಚ್ಚು ಹಣ ಪಡೆಯುತ್ತಿರುವುದು ಗಮನಕ್ಕೆ ಬಂದಿದ್ದು ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ ಅವರು ಆರೋಗ್ಯ ಇಲಾಖೆಕೆ ವತಿಯಿಂದ ತಾತ್ಕಾಲಿಕವಾಗಿ ಹೆಚ್ಚುವರಿಯಾಗಿ ಅಂಬುಲೆನ್ಸ್ ಗಳನ್ನು ತೆಗೆದು ಕೊಳ್ಳುವಂತೆ ಸೂಚಿಸಿದರು.

ಆಮ್ಲಜನಕ ಕೊರತೆಯನ್ನು ತಡೆಗಟ್ಟಲು ಸಾಧ್ಯವಾದಷ್ಟು ಖಾಸಗಿ ಆಸ್ಪತ್ರೆಗಳು ಆಮ್ಲಜನಕದ ಉತ್ಪಾಧನಾ ಘಟಕಗಳನ್ನು ( ಆಮ್ಲಜನಕ ಜನರೇಟರ್‍ಗಳು) ಸ್ಥಾಪಿಸಿಕೊಳ್ಳುವುದು ಉತ್ತಮ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಹಿಮ್ಸ್ ಆಸ್ಪತ್ರೆಯ ಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ|| ಸುರೇಶ್ ಅವರು ಮಾತನಾಡಿ ಖಾಸಗಿ ಆಸ್ಪತ್ರೆಗಳು ಉತ್ತಮ ಸಹಕಾರವನ್ನು ನೀಡುತ್ತಿದ್ದು. ರೋಗಿಗಳಿಗೆ ನೀಡಿರುವ ಚಿಕಿತ್ಸೆಯ ವಿವರಗಳು ಹಾಗೂ ದಾಖಲೆಗಳನ್ನು ಬಗ್ಗೆ ಕ್ರಮವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಸತೀಶ್, ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾದ್ಯಕ್ಷರಾದ ಡಾ|| ರಮೇಶ್, ಔಷಧಿ ನಿಯಂತ್ರಕ ರಾದ ಡಾ|| ಗಿರೀಶ್ ಹಾಗೂ ಖಾಸಗಿ ಆಸ್ಪತ್ರೆಗಳ ಸಂಘದ ಪ್ರಮುಖರಾದ ಡಾ|| ಬಶೀರ್ ಅಹಮದ್ ಮತ್ತಿತರರು ಹಾಜರಿದ್ದರು. s

LEAVE A REPLY

Please enter your comment!
Please enter your name here