ಉದ್ಯೋಗಿನಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದಿರುವ ಮಹಿಳೆಯರು ಸ್ವಂತ ಉದ್ಯೋಗ ಕೈಗೊಳ್ಳಲು ಬ್ಯಾಂಕ್‍ಗಳಿಂದ ಸಾಲ

    0

    ಹಾಸನ : ಜ.10 (ಹಾಸನ್_ನ್ಯೂಸ್) ! , ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಳಕೆಯಾಗದ ಅನುದಾನದಡಿ 2020-21ನೇ ಸಾಲಿಗೆ ಉದ್ಯೋಗಿನಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದಿರುವ ಮಹಿಳೆಯರು ಸ್ವಂತ ಉದ್ಯೋಗ ಕೈಗೊಳ್ಳಲು ಬ್ಯಾಂಕ್‍ಗಳಿಂದ ಸಾಲ ಮತ್ತು ನಿಗಮದಿಂದ ಸಹಾಯಧನ ನೀಡಲಾಗುವುದು. ಪ್ರತಿ ತಾಲ್ಲೂಕಿಗೆ 01 ಗುರಿ ಮಾತ್ರ ನಿಗಧಿಯಾಗಿರುತ್ತದೆ. ಮತ್ತು ಸಮೃದ್ಧಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದಿರುವ 18 ರಿಂದ 60 ವರ್ಷದೊಳಗಿನ ಮಹಿಳಾ ಬೀದಿಬದಿ ವ್ಯಾಪಾರಸ್ಥರಿಗೆ ರೂ 10,000/- ಪ್ರೋತ್ಸಾಹಧನ ನೀಡಲಾಗುವುದು. ಪ್ರತಿ ತಾಲ್ಲೂಕಿಗೆ ಎಸ್.ಸಿ 4 ಎಸ್.ಟಿ 9 ಗುರಿ ನಿಗಧಿಯಾಗಿರುತ್ತದೆ

       ಎರಡೂ ಯೋಜನೆಗಳಡಿ ಪ.ಜಾತಿ & ಪ.ಪಂಗಡದ ಮಹಿಳೆಯರಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜ.16 ಕೊನೆಯ ದಿನಾಂಕ ವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ -ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು

    LEAVE A REPLY

    Please enter your comment!
    Please enter your name here