ಅತಿವೃಷ್ಠಿ ಹಾನಿ ನಿಯಂತ್ರಣ ಪೂರ್ವಸಿದ್ದತೆಗೆ ಮುಂಜಾಗ್ರತಾ ಕ್ರಮವಹಿಸಲು ಸೂಚನೆ

0

ಮುಂಗಾರಿನಲ್ಲಿ ಅತಿವೃಷ್ಠಿಯಿಂದ ಜನ ಜಾನುವಾರಗಳ ಪ್ರಾಣಕ್ಕೆ ಯಾವುದೇ ರೀತಿಯ ಹಾನಿಯಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನುವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ೧೨ ಮಳೆ ಹೆಚ್ಚಿರುವ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು ಅತಿವೃಷ್ಠಿಯಿಂದ ಅಪಾಯವಾಗುವಂತಹ ಬಗ್ಗೆ ನಿಗಾವಹಿಸಿ ಅನಿವಾರ್ಯ ಸಂದರ್ಭಗಳಲ್ಲಿ ಸೂಕ್ತ ಪ್ರದೇಶಗಳಿಗೆ ಸ್ಥಳಾಂತರಿಸಿ ಹಾಗೂ ಯಾವುದೇ ಗ್ರಾಮಕ್ಕೆ ಸಂಪರ್ಕದ ಸಮಸ್ಯೆ ಉಂಟಾಗದಂತೆ ಎಚ್ಚರವಹಿಸಿ ಎಂದು ಅಧಿಕಾರಿಗಳಿಗೆ ನಿರ್ದೆಶಿಸಿದರು.

ಪ್ರವಾಹದಿಂದ ಸಂಭವಿಸುವ ಬೆಳೆಗಾಗಿ ಹಾನಿ ಹಾಗೂ ಭೂ ಕುಸಿತಗಳನ್ನು ಕಡಿಮೆಗೊಳಿಸಲು ಎಲ್ಲಾ ರೀತಿಯ ಮುಂಜಾಗೃತಾ ಪ್ರಯತ್ನಗಳನ್ನು ಮಾಡಬೇಕಿದೆ. ರಾಜ್ಯದಲ್ಲಿ ದೊರೆತಿರುವ ಮಾಹಿತಿಯ ಪ್ರಕಾರ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದ್ದು, ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಉತ್ತಮವಾಗಿ ಮಳೆಯಾಗುತ್ತಿದೆ ದಕ್ಷಿಣ ಒಳನಾಡಿನಲ್ಲಿ ಶೇ. ೧೯೯, ಉತ್ತರ ಒಳನಾಡಿನಲ್ಲಿ ಶೇ. ೧೨೦, ಮಲೆನಾಡು ಭಾಗದಲ್ಲಿ ಶೇ.೪೩ ಹಾಗೂ ಕರಾವಳಿ ಪ್ರದೇಶದಲ್ಲಿ ಶೆ.೪೦ರಷ್ಟು ಅಧಿಕ ಮಳೆಯಾಗಿದೆ ಎಂದರು.

ಕಳೆದ ೩ ವರ್ಷಗಳಿಂದ ರಾಜ್ಯವು ತೀವ್ರ ಪ್ರವಾಹ ಹಾಗೂ ಭೂಕುಸಿತಗಳನ್ನು ಎದುರಿಸುತ್ತಿದ್ದು, ಸಂಭವನೀಯ ಹಾನಿ ನಿಯಂತ್ರಣಾ ಹಾಗೂ ಜನಜಾನುವಾರುಗಳ ಜೀವ ರಕ್ಷಣೆಗೆ ಸನ್ನದ್ದರಾಗಬೇಕಿದೆ ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದ್ದಾರೆ

ಕಳೆದ ಸಾಲಿನಲ್ಲಿ ಹೊರಡಿಸಲಾದ ಸುತ್ತೋಲೆಯಂತೆ ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ ೫ ಲಕ್ಷ ರೂ ಪರಿಹಾರಹಣವನ್ನು ನೀಡಿ ತುರ್ತು ನಿರ್ವಹಣೆಗೆ ಬೇಕಾಗುವ ಸಾಮಾಗ್ರಿಗಳನ್ನು ಅಗತ್ಯಕ್ಕನುಗುಣವಾಗಿ ಖರೀದಿಸಲು ಕ್ರಮಕೈಗೊಳ್ಳಿ ಹಾಗೂ ಪ್ರವಾಹದ ಸಂದರ್ಭದಲ್ಲಿ ಜನರ ರಕ್ಷಣೆ ಹಾಗೂ ಅಗತ್ಯ ಮೂಲ ಸೌಲಭ್ಯಗಳ ಕಾಳಜಿ ಕೇಂದ್ರಗಳು, ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಪೂರ್ವಸಿದ್ದತೆ ಮಾಡಿಕೊಳ್ಳುವುದು ಅಗತ್ಯವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಮಟ್ಟದಲ್ಲಿ ಪ್ರವಾಹ ಪೀಡಿತ ಗ್ರಾಮಗಳನ್ನು ಗುರುತಿಸಿ ಪ್ರವಾಹ ಪರಿಸ್ಥಿತಿ ಎದುರಿಸಲು ಸೂಕ್ತ ಸಿದ್ದತೆಗಳನ್ನು ಮಾಡಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ ಸ್ಥಾಪನೆ ಹಾಗೂ ದೂರವಾಣಿ ಸಂಪರ್ಕವನ್ನು ಸುಸ್ಥಿತಿಯಲ್ಲಿರಿಸುವಂತೆ ತಿಳಿಸಿದರು

ಕಂದಾಯ ಇಲಾಖೆ ಸಚಿವರಾದ ಆರ್. ಅಶೋಕ್ ಅವರು ಮಾತನಾಡಿ ಪ್ರಕೃತಿ ವಿಕೋಪ ನಿರ್ವಹಣೆಗಾಗಿ ಈಗಾಗಲೇ ಎಲ್ಲಾ ಜಿಲ್ಲೆಗಳಲ್ಲಿ ಸಾಕಷ್ಟು ಹಣ ಲಭ್ಯವಿದ್ದು ಇನ್ನೂ ಹೆಚ್ಚಿನ ಅನುದಾನ ಅವಶ್ಯಕತೆ ಇದ್ದಲ್ಲಿ ಸರ್ಕಾರದಿಂದ ಒದಗಿಸಲಾಗುವುದು ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಗ್ರಾಮ ಪಂಚಾಯಿತಿವಾರು ಕಾರ್ಯಪಡೆ ರಚಿಸಿದ್ದು ಅವರು ಈಗಾಲೇ ಜಾಗೃತರಾಗಿ ಕಾರ್ಯನಿರ್ವಹಿಸಬೇಕು ಎಂದರು.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, , ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಇಲಾಖೆಯ ಸಚಿವ ಆರ್.ಅಶೋಕರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಸೇರಿದಂತೆ ವಿವಿಧ ಇಲಾಖೆಗಳ ಸಚಿವರು ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಮಾತನಾಡಿ ಆಗಸ್ಟ್ ಮೊದಲನೇ ಹಾಗೂ ಎರೆಡನೇ ವಾರ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಸಂಬAಧಪಟ್ಟ ಅಧಿಕಾರಿಗಳೊಡನೆ ಸಭೆ ನಡೆಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪೂರ್ಣ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು ೬ ಮನೆಗಳು ಹಾನಿಗೊಳಗಾಗಿದ್ದು ಅವುಗಳಿಗೆ ನಿಯಮಾನುಸಾರ ಪರಿಹಾರ ನೀಡಲಾಗುತ್ತಿದೆ. ಯಾವುದೇ ರೀತಿಯ ಮಾನವ ಜೀವ ಹಾನಿ ಅಥವಾ ಬೆಳೆನಷ್ಟ ವರದಿಯಾಗಿಲ್ಲ. ಒಂದು ಜಾನುವಾರು ಸಾವನ್ನಪ್ಪಿದೆ. ಈಗಾಗಲೆ ಶೇ.೫೬ರಷ್ಟು ಬಿತ್ತನೆಯಾಗಿದ್ದು, ಮಳೆಯಿಂದ ಬಿತ್ತನೆಗೆ ಯಾವುದೇ ರೀತಿಯ ಹಾನಿಯಂಟಾಗಿಲ್ಲ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ್ ಗೌಡ, ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಜಂಟಿ ಕೃಷಿ ನಿರ್ದೇಶಕರಾದ ಹೆಚ್.ಕೆ ರವಿ ಹಾಗೂ ಮತ್ತಿತರರ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here