ನಗರದಲ್ಲಿನ ರಸ್ತೆ, ಒಳಚರಂಡಿ ಹಾಗೂ ಇನ್ನಿತರ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಯವರ ಕಚೇರಿಯಲ್ಲಿಂದು ನಗರೋತ್ತನ ಯೋಜನೆ ಕುರಿತು ಸಭೆ ನಡೆಸಿ ಮಾತನಾಡಿದ ಅವರು ನಗರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪೂರ್ಣ ಮಾಹಿತಿಯನ್ನು ಸ್ವವಿರಗಳೊಂದಿಗೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ನಗರದ ಸಾಲಗಾಮೆ ರಸ್ತೆ, ಗೊರೂರು ಮಾರ್ಗದ ರಸ್ತೆ ಹಾಗೂ ನಗರ ಸಭೆ ಹತ್ತಿರದ ರಸ್ತೆಯನ್ನು ಶೀಘ್ರವಾಗಿ ಸರಿಪಡಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಿ.ಎ. ಜಗದೀಶ್ ಹಾಗೂ ಪಿ.ಡಬ್ಲ್ಯೂ.ಡಿ., ಚೆಸ್ಕಾಂ ಮತ್ತು ಡಿ.ಯು.ಡಿ.ಸಿ ಕಾರ್ಯಪಾಲಕ ಅಭಿಯಂತರರು ಸಭೆಯಲ್ಲಿ ಹಾಜರಿದ್ದರು.