ಅರಕಲಗೂಡು ಹತ್ತಿ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಹತ್ತಿ ಬೆಂಕಿಗಾಹುತಿ

0

ಪಟ್ಟಣದ ವಿನಾಯಕ ನಗರದ ಗದ್ದೆ ಹಳ್ಳ ಮುಖ್ಯರಸ್ತೆಯಲ್ಲಿರುವ ಮಂಜುನಾಥ ರವರ ಬಿಲ್ಡಿಂಗ್ ನಲ್ಲಿ ಬಾಡಿಗೆಗೆ ಇದ್ದ ರಿಜ್ವಾನ್ ರವರಿಗೆ ಸೇರಿದ ಹಾಸಿಗೆ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿದ್ದು ಲಕ್ಷಾಂತರ ಮೌಲ್ಯದ ಹತ್ತಿ ಬೆಂಕಿಗೆ ಆಹುತಿ ಆಗಿದೆ.
ಅಂಗಡಿ ಮಾಲಿಕ ಬೆಳಗ್ಗೆ ಹತ್ತಿ ಅಂಗಡಿ ಬಾಗಿಲು ಹಾಕಿಕೊಂಡು ಹಳ್ಳಿಗಳಿಗೆ ವ್ಯಾಪಾರಕ್ಕೆ ಹೊಗಿದ್ದಾರೆ. ಸಂಜೆಯ ವೇಳೆಗೆ ಹತ್ತಿ ಅಂಗಡಿಯಿಂದ ಹೊಗೆ ಬರುತ್ತಿದ್ದನ್ನು ಕಂಡ ಸ್ಥಳೀಯರು ಅಗ್ನಿ ಶಾಮಕ ಸಿಬ್ಬಂದಿಗೆ ಕರೆ ಮಾಡಿ ತಿಳಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here