ಅರಣ್ಯ ಸಚಿವರನ್ನು ಭೇಟಿ ಮಾಡಿದ ಶಾಸಕ ಸಿಮೆಂಟ್ ಮಂಜು ; ಕಾಡಾನೆ ಸಮಸ್ಯೆ ಪರಿಹಾರಕ್ಕೆ ಒತ್ತಾಯ

0

ಹಾಸನ/ಸಕಲೇಶಪುರ : ಕಾಡಾನೆ ಹಾವಳಿಯಿಂದ ಸಕಲೇಶಪುರ ಹಾಗೂ ಆಲೂರು ತಾಲೂಕಿನ ಜನ ಅತಿ ಹೆಚ್ಚು ತೊಂದರೆ ಅನುಭವಿಸಿದ್ದು ಈ ಹಿನ್ನೆಲೆಯಲ್ಲಿ ತಾವು ತಕ್ಷಣ ಕ್ಷೇತ್ರಕ್ಕೆ ಆಗಮಿಸಿ ವಿವಿಧ ಬೆಳಗಾರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ರೈತ ಪರ ಸಂಘಟನೆಗಳು ಹಾಗೂ ಎಲ್ಲಾ ಪ್ರಮುಖ ಸಂಘಟನೆಗಳ ಮುಖಂಡರನ್ನು ಆಹ್ವಾನಿಸಿ ಕಾಡಾನೆ ಸಮಸ್ಯೆಗೆ ಪರಿಹಾರ ಹುಡುಕಲು ದೊಡ್ಡ ಸಭೆ ಮಾಡಬೇಕು,

ಕಾಡಾನೆ ದಾಳಿಯಿಂದ ಮೃತಪಟ್ಟಿರುವ ಅರಣ್ಯ ಇಲಾಖೆಯ ಗುತ್ತಿಗೆ ನೌಕರ ವೆಂಕಟೇಶ್ ರವರ ಪ್ರಕರಣವನ್ನು ವಿಶೇಷವಾಗಿ ಪರಿಗಣಿಸಿ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಮೃತಪಟ್ಟ ಅಧಿಕಾರಿಗಳಿಗೆ ನೀಡುವ ಎಲ್ಲಾ ಸೌಲಭ್ಯವನ್ನು ಅವರ ಕುಟುಂಬ ವರ್ಗಕ್ಕೆ ನೀಡಬೇಕು ಹಾಗೂ ಕಾಡಾನೆ ದಾಳಿ ಖಂಡಿಸಿ ಪ್ರತಿಭಟನೆ ಮಾಡಿದ ಕೆಪಿಸಿಸಿ ಸದಸ್ಯ ಯಡೆಹಳ್ಳಿ ಮಂಜುನಾಥ್ ಹಾಗೂ ಇತರ ಪ್ರತಿಭಟನಾಕಾರರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಶಾಸಕ ಸಿಮೆಂಟ್ ಮಂಜು ಆಲೂರು ತಾಲೂಕಿನಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ವೆಂಕಟೇಶ್ ರವರ ಅಂತಿಮ ಸಂಸ್ಕಾರದಲ್ಲಿ ಭಾಗಿಯಾದ ನಂತರ ಬೆಂಗಳೂರಿಗೆ ಹೋಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುತ್ತಾರೆ

LEAVE A REPLY

Please enter your comment!
Please enter your name here