ಅರಸೀಕೆರೆ ನಗರದ್ಯಂತ ವಿಜ್ರಂಭಣೆಯಿಂದ ಈದ್ ಮಿಲಾದ್ ಹಬ್ಬವನ್ನು ಆಚರಿಸಲಾಯಿತು

0

ಅರಸೀಕೆರೆ: ಈದ್ ಮಿಲಾದ್ ಇಸ್ಲಾಂ ಧರ್ಮದ ಪ್ರಮುಖ ಆಚರಣೆಗಳಲ್ಲಿ ಒಂದು. ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿವಸಲ್ಲಮರ ಜನ್ಮ ದಿನಾಚರಣೆಯನ್ನು ಪ್ರತೀವರ್ಷ ಈದ್ ಮಿಲಾದ್ ಎಂಬ ಹೆಸರಿನಲ್ಲಿ ಜಗತ್ತಿನಾದ್ಯಂತ ಮುಸಲ್ಮಾನರು ಆಚರಿಸುತ್ತಾರೆ. ಇಸ್ಲಾಂ ಧರ್ಮದಲ್ಲಿ ಈದ್ ಮಿಲಾದ್ ಆಚರಣೆಗೆ ಅತ್ಯಂತ ದೊಡ್ಡ ಪ್ರಾಮುಖ್ಯತೆಯಿದೆ. ಈದ್ ಮಿಲಾದ್ ಆಚರಣೆಯನ್ನು ಜಗತ್ತಿನ ವಿವಿಧ ಕಡೆಗಳಲ್ಲಿ ವಿವಿಧ ರೀತಿಯಾಗಿ ಆಚರಿಸಲಾಗುತ್ತದೆ. ಅರಸೀಕೆರೆ ನಗರದ್ಯಂತ ವಿಜ್ರಂಭಣೆಯಿಂದ ಈದ್ ಮಿಲಾದ್ ಹಬ್ಬವನ್ನು ಆಚರಿಸಲಾಯಿತು. ಹಬ್ಬದ ಪ್ರಯುಕ್ತ ನಗರದ ಮಸೀದಿಗಳು, ಮದರೆಸಗಳು, ದರ್ಗಾಗಳು ಹಾಗೂ ಪ್ರಮುಖ ರಸ್ತೆಗಳನ್ನು ದೀಪಗಳಿಂದ ಹಾಗೂ ಹೂಗಳಿಂದ ಅಲಂಕರಿಸಲಾಗಿತ್ತು.

ಸುನ್ನಿ ಮುಸ್ಲಿಂ ಜಮಾತ್ ಕಮಿಟಿ ಹಾಗೂ ಸುಲ್ತಾನುಲ್ ಹಿಂದ್ ಟ್ರಸ್ಟ್ ವತಿಯಿಂದ ಧ್ವಜಾರೋಹಣ ನೆರವೇರಿಸಲಾಯಿತು. ಸುನ್ನಿ ಮುಸ್ಲಿಂ ಜಮಾತ್ ಕಮೆಟಿ ವತಿಯಿಂದ ಬೆಳಗ್ಗೆ 11 ಗಂಟೆಯಿಂದ ಬೈಕ್ ರ್ಯಾಲಿಯನ್ನು ನಡೆಸಲಾಯಿತು ತದನಂತರ 3:00 ಗಂಟೆಯಿಂದ ಸರಿಯಾಗಿ ಸುನಿ ಜಾಮಿಯಾ ಮಸೀದಿ ಮುಂಭಾಗದಿಂದ ಹೊರಟು ಈದ್ ಮಿಲಾದ್ ಮೆರವಣಿಗೆಯನ್ನು ನಗರದ ಪ್ರಮುಖ ಬೀದಿಗಳಲ್ಲಿ ನಡೆಸಲಾಯಿತು ಮೆರವಣಿಗೆಯಲ್ಲಿ ಎಸ್ ಡಿ ಐ ಮದರೆಸೆ ಅಬು ಹೂರೇರಾದ ಸಣ್ಣ ಸಣ್ಣ ಮಕ್ಕಳು ತಮ್ಮ ಕೈಯಲ್ಲಿ ಬಾವುಟ ಹಿಡಿದುಕೊಂಡು ಮೆರವಣಿಗೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಹಾಗೂ ಮಾಜಿ ನಗರಸಭೆ ಅಧ್ಯಕ್ಷರಾದ ಹಾಗೂ ಹಾಲಿ ಸದಸ್ಯರಾದ ಎಂ ಸಮಿಉಲ್ಲಾ ರವರು ಹಾಗೂ ಮುಸ್ಲಿಂ ಬಾಂಧವರು ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ ಪುತ್ತಳಿಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ಕೆಎಂ ಶಿವಲಿಂಗೇಗೌಡರು ಮುಸ್ಲಿಂ ಬಾಂಧವರಿಗೆ ಈದ್ ಮಿಲಾದ್ ಹಬ್ಬದ ಶುಭಾಶಯಗಳನ್ನು ಕೋರಿದರು. ಮೆರವಣಿಗೆ ಮುಗಿದ ನಂತರ ಸುನ್ನಿ ಜಾಮಿಯಾ ಮಸೀದಿಯ ಮುಂಭಾಗ ಸುನ್ನಿ ದಾವತೇ ಇಸ್ಲಾಮಿ ವತಿಯಿಂದ ತಂಪು ಪಾನೀಯದ ವ್ಯವಸ್ಥೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here