ಅ.28 ರಂದು ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ

0
Blood bag and hand of donor with heart. Blood donation day concept. Human donates blood. Vector illustration in flat style.

ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ನಗರದ ಹೇಮಾವತಿ ಪ್ರತಿಮೆಯ ಕಾರು ನಿಲ್ದಾಣದ ಒಂದು ಭಾಗದಲ್ಲಿ ಅ.28 ರಂದು ಬೆಳಗ್ಗೆ 10 ಗಂಟೆಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಹಾಸನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ಪ್ರತಿಬಂಧಕ ಘಟಕ, ಹಿಮ್ಸ್ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು, ಹಾಸನ ಮಜ್ದೂರು ಆಟೋ ಚಾಲಕರ ಸಂಘ, ಮತ್ತು ಸರ್ಕಾರಿ ರಕ್ತನಿಧಿ ಕೇಂದ್ರ ಹಾಸನ ಮತ್ತು ಇತರೆ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಇತ್ತೀಚಿನ ದಿನಗಳಲ್ಲಿ ರಕ್ತದಾನಿಗಳ ಸಂಖ್ಯೆಯಲ್ಲಿ ಇಳಿಮುಖವಾಗಿದ್ದು, ಜಿಲ್ಲೆಯ ರಕ್ತ ನಿಧಿಗಳಲ್ಲಿ ರಕ್ತದ ಕೊರತೆಯಿದೆ ಎಂದು ತಿಳಿದು ಬಂದಿರುವುದರಿಂದ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಬಂದು ರಕ್ತದಾನ ಶಿಬಿರದಲ್ಲಿ ಪಾಲ್ಗೊಳ್ಳಲು ಕೋರಿದೆ.

ಆಸಕ್ತ ರಕ್ತದಾನಿಗಳು ನೊಂದಣೆಗಾಗಿ ದೂರವಾಣಿ ಸಂಖ್ಯೆ: 9141516430, 8762622200ಗೆ ಸಂಪರ್ಕಿಸಬಹುದಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕಾರ್ಯದರ್ಶಿ ತಿಳಿಸಿದ್ದಾರೆ.

Advertisements

LEAVE A REPLY

Please enter your comment!
Please enter your name here