ಆನೆ ದಾಳಿಯಿಂದ ಮೃತ ಪಟ್ಟ ವ್ಯಕ್ತಿ ಮನೆಗೆ ಸಚಿವರು ಭೇಟಿ

0

ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಮತ್ತು ಅರಣ್ಯ ಸಚಿವರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಅರವಿಂದ ಲಿಂಬಾವಳಿ ಅವರು ಆನೆ ದಾಳಿಯಿಂದ ಇತ್ತೀಚೆಗೆ ಮೃತ ಪಟ್ಟಿದ್ದ ಸಕಲೇಶಪುರ ತಾಲ್ಲೂಕಿನ ಕೊಲ್ಲಹಳ್ಳಿ ಗ್ರಾಮದ ಆಸ್ತಿಕ್ ಭಟ್ ಅವರ ಮನೆಗೆ ಇಂದು ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುವದು ಎಂದು ಭರವಸೆ ನೀಡಿದ ಅವರು ಒಂದು ವರ್ಷದ ಅವಧಿಯಲ್ಲಿ ಇದು ನಾಲ್ಕನೇ ಪ್ರಕರಣವಾಗಿದ್ದು. ಈಗಾಗಲೇ ಅರಣ್ಯ ಇಲಾಖೆಯಿಂದ ಪರಿಹಾರ ಧನವಾಗಿ 7,50,000 ನೀಡಲಾಗಿದೆ. ದೇಶದ ಬೇರೆ ಯಾವುದೇ ರಾಜ್ಯದಲ್ಲಿ ಇಷ್ಟು ದೊಡ್ಡ ಮಟ್ಟದ ಪರಿಹಾರ ನೀಡುತ್ತಿಲ್ಲ. ಪ್ರತಿ ತಿಂಗಳಿಗೆ 2000 ರೂಪಾಯಿಯಂತೆ ಮುಂಬರುವ 5 ವರ್ಷಗಳವರೆಗೆ ಪರಿಹಾರ ನೀಡಲಾಗುತ್ತದೆ. ಮೃತರ ಮಗಳು ಪದವೀಧರಳಾಗಿದ್ದು ಸರ್ಕಾರದಿಂದ ನೌಕರಿ ಕೊಡುವ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು ಎಂದು ಹೇಳಿದರು.

LEAVE A REPLY

Please enter your comment!
Please enter your name here