ಆನೆ ಹಾವಳಿ ನಿಯಂತ್ರಣ ನೆರವಿಗೆ ಕೇಂದ್ರಕ್ಕೆ ನಿಯೋಗ-ಸಚಿವ ಅರವಿಂದ ಲಿಂಬಾವಳಿ

0

ಮುಂಬರುವ ಮಾರ್ಚ್ 8 ರ ನಂತರ ಕೇಂದ್ರದ ಲೋಕಸಭಾ ಅಧಿವೇಶನ ನಡೆಯುವ ಸಂದರ್ಭದಲ್ಲಿ ರಾಜ್ಯದ ನಿಯೋಗದೊಂದಿಗೆ ಕೇಂದ್ರ ಪರಿಸರ ,ಅರಣ್ಯ ಹಾಗೂ ಹಣಕಾಸು ಸಚಿವರು ಮತ್ತು ಅಧಿಕಾರಿಗಳನ್ನು ಭೇಟಿ ಮಾಡಿ ಆನೆ ಹಾವಳಿ ನಿಯಂತ್ರಣಕ್ಕೆ ಹೆಚ್ಚಿನ ನೆರವನ್ನು ಕೋರಲಾಗುವುದು ಎಂದು ಅರಣ್ಯ ,ಕನ್ನಡ ಮತ್ತು ಸಂಸ್ಕøತಿ ಸಚಿವರಾದ ಅರವಿಂದ ಲಿಂಬಾವಳಿಯವರು ತಿಳಿಸಿದ್ದಾರೆ.

ಸಕಲೇಶಪುರ ಪುರಭವನದಲ್ಲಿಂದು ಏರ್ಪಡಿಸಿದ್ದ ಸಾರ್ವಜನಿಕ ಸಮಾಲೋಚನೆ ಸಭೆಯಲ್ಲಿ ಮಾತನಾಡಿದ ಅವರು ಆನೆ ಹಾವಳಿ ತಡೆಗೆ ರಾಜ್ಯದಲ್ಲಿ ನಿರಂತರ ಪ್ರಯತ್ನ ನಡೆಯುತ್ತಿದೆ. ಕೇಂದ್ರದಿಂದ ಹೆಚ್ಚಿನ ಅನುದಾನ ಹಾಗೂ ಕಡಿಮೆ ಹಣದಲ್ಲಿ ರೈಲ್ವೆ ಹಳಿಗಳನ್ನು ನೀಡುವಂತೆ ಮನವಿ ಮಾಡಲಾಗುವುದು ಎಂದರು.
ಸಧ್ಯದ ಪರಿಸ್ಥಿತಿಯಲ್ಲಿ ಮುಂದಿನ ಒಂದೆರೆಡು ವರ್ಷ ಅರಣ್ಯ ವಿಸ್ತರಣೆ ಮೂಲಕ ಉದ್ದೇಶಿತ ಆನೆ ಕಾರಿಡಾರ್ ಸ್ಥಾಪನೆ ಅಸಾಧ್ಯ ಆರ್ಥಿಕ ಪರಿಸ್ಥಿತಿ ಸುಧಾರಣೆಗೊಂಡ ನಂತರ ಈ ಬಗ್ಗೆ ಪ್ರಯತ್ನ ಮುಂದುವರಿಸಬಹುದು ಎಂದರು .
ಅಧಿಕಾರಿಗಳ ಪರಿಶ್ರಮದಿಂದ ರಾಜ್ಯದಲ್ಲಿ ಅರಣ್ಯ ಪ್ರದೇಶ ಅಭಿವೃದ್ಧಿಯಾಗಿದೆ. ಸಭೆಯಲ್ಲಿ ಸ್ಥಳೀಯ ಸಮಸ್ಯೆಗಳ ಬಗ್ಗೆ ಜನ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ತಮ್ಮ ಭಾವನೆ ವ್ಯಕ್ತಪಡಿಸಿದ್ದಾರೆ ಅವುಗಳ ಬಗ್ಗೆ ಗಮನಹರಿಸಿ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದರು.

ಗಣಿಗಾರಿಕೆ ಸೇರಿದಂತೆ ಹಲವು ಯೋಜನೆಗಳ ಅನುಷ್ಠಾನದಿಂದ ಆನೆ ಸೇರಿದಂತೆ ಹಲವು ಕಾಡು ಪ್ರಾಣಿಗಳು ತಮ್ಮ ಆವಾಸ ಸ್ಥಾನ ಬದಲಿಸುತ್ತಿವೆ.ವನ್ಯ ಜೀವಿಗಳು ಹಾಗೂ ಮಾನವ ಸಂಘರ್ಷ ತಡೆಗೆ ಇಲಾಖೆ ವತಿಯಿಂದ ಗಂಭೀüರ ಪ್ರಯತ್ನವನ್ನು ವೈಜ್ಞಾನಿಕವಾಗಿ ಮಾಡಲಾಗುವುದು. ಫೆ 25 ರಂದು ರಾಜ್ಯದ ಅರಣ್ಯ ಪ್ರದೇಶಗಳ ಶಾಸಕರ ಸಭೆ ಕರೆಯಲಾಗಿದೆ. ಅಲ್ಲಿ ಬರುವ ಅಭಿಪ್ರಾಯ ಕ್ರೂಢೀಕರಿಸಿ ಕೇಂದ್ರಕ್ಕೆ ಪ್ರಸ್ತಾವನೆ ಮಂಡಿಸಲಾಗುವುದು ಎಂದು ಅರಣ್ಯ ಸಚಿವರು ಹೇಳಿದರು.

ಅರಣ್ಯ ಇಲಾಖೆಗೆ ಮೂಲಭೂತ ಸೌಕರ್ಯ ಒದಗಿಸಲಾಗುವುದು. ಈಗಾಗಾಲೇ ಇಲಾಖೆಯಲ್ಲಿನ ಸಮಸ್ಯೆಗಳ ಬಗ್ಗೆ ಅರಿತಿದ್ದೇನೆ ಮುಂದೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಗಳನ್ನು ನಡೆಸುವುದಾಗಿ ಸಚಿವರಾದ ಅರವಿಂದ ಲಿಂಬಾವಳಿ ಹೇಳಿದರು

ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರದ ಅನುಮತಿ ಬೇಕು .ಮೊದಲು ತಡಗೋಡೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳಬೇಕು ಆ ನಂತರ ಆನೆಗಳ ಸ್ಥಳಾಂತರ ಮಾಡಬೇಕು .ಪುಂಡಾನೆಗಳನ್ನ ಹಿಡಿದು ಅನೆ ಕ್ಯಾಂಪ್‍ಗಳಿಗೆ ವರ್ಗಾಯಿಸುವ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎಂದು ಅರಣ್ಯ ಸಚಿವರು ಹೇಳಿದರು.

ರಾಜ್ಯದಲ್ಲಿ ವನ್ಯ ಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ದೇಶದಲ್ಲಿಯೇ ಹೆಚ್ಚು ಪರಿಹಾರ ನೀಡಲಾಗುತ್ತಿದೆ. ಸಾಕು ಪ್ರಾಣಿಗಳ ಸಾವಿಗೆ ಪರಿಹಾರ ಇನ್ನೂ ಹೆಚ್ಚು ನೆರವು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಹಾಸನ ಜಿಲ್ಲೆಯಲ್ಲಿ ರೈತರಿಗೆ ನೀಡಬೇಕಾಗಿರುವ ಹಿಂದಿನ ಬೆಳೆ ನಷ್ಟ ಪರಿಹಾರವನ್ನು 15 ದಿನಗಳಲ್ಲಿ ನೀಡಲಾಗುವುದು .ಇನ್ನೂ ಬಾಕಿ ಇರುವ ಪ್ರಸ್ತಾವನೆಗಳನ್ನು ಶೀಘ್ರವಾಗಿ ತರಿಸಿಕೊಂಡು ಅಗತ್ಯ ಕ್ರಮ ವಹಿಸಲಾಗುವುದು ಎಂದರು .

ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಮಾತನಾಡಿ ಮುಂದಿನ ಕೆಲವೇ ದಿನಗಳಲ್ಲಿ ಜನಪ್ರತಿನಿಧಿಗಳ ನಿಯೋಗ ದೆಹಲಿ ಭೇಟಿ ನೀಡಲಿದ್ದು ಈ ವೇಳೆ ಸ್ಥಳೀಯ ಪ್ರಮುಖರನ್ನು ಕರೆದೊಯ್ಯಲಾಗುವುದು ಎಂದರು.
ಕಳೆದ 25 ವರ್ಷಗಳಿಂದ ಆನೆ ಹಾವಳಿಯಿಂದ ಎಷ್ಟು ಸಾವು ಸಂಭವಿಸಿತು ಹಾಗು ಬೆಳೆ ನಷ್ಟಗಳಾಗಿದೆ. ಎಂಬುದರ ಬಗ್ಗೆ ಅರಣ್ಯಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿ ಬೆಳೆ ಹಾನಿಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಸಚಿವ ಕೆ ಗೋಪಾಲಯ್ಯ ರವರು ಹೇಳಿದರು.

ಫೆ. 25 ರಂದು ಬೇಲೂರಿನಲ್ಲಿ ತಾವು ಜನಸಂಪರ್ಕ ಸಭೆ ನಡೆಸುತ್ತಿದ್ದು,ಫೆ.20ರಂದು ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರರು ವಿವಿಧ ಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ ಎಂದರು.

ಈಗಾಗಲೇ ಕೋರೊನ ಸೋಂಕು ಹತೋಟಿಗೆ ಬಂದಿದ್ದು, ಅಭಿವೃದ್ಧಿ ಕೆಲಸ ಕಾರ್ಯಗಳು ಇನ್ನೂ ಮುಂದೆ ನಿರಾತಂಕವಾಗಿ ಸಾಗುತ್ತವೆ,ಕಳೆದ ಒಂದು ವರ್ಷದಲ್ಲಿ ಆದಂತಹ ಹಣಕಾಸು ಪರಿಸ್ಥಿತಿ ಹಿನ್ನಡೆ ಸರಿದೂಗಿಸಲು ಇನ್ನೂ ಮೂರ್ನಾಲ್ಕು ವರ್ಷ ಬೇಕಾಗುತ್ತದೆ. ಆದರೆ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಶ್ರಮಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.
ಲೋಕಸಭಾ ಸದಸ್ಯರಾದ ಪ್ರಜ್ವಲ್ ರೇವಣ್ಣ ಅವರು ಮಾತನಾಡಿ ಆನೆ ನಿಯಂತ್ರಣಕ್ಕೆ ಬ್ಯಾರಿಕೇಡ್ ಹಾಕಲು ವಾಸ್ತವ ಅಗತ್ಯ ದಷ್ಟು ಅನುದಾನ ಒಂದೇ ಭಾರಿಗೆ ಒದಗಿಸಬೇಕು ಎಂದರು.
ಆನೆಕಾರಿಡಾರ್ ಯೋಜನೆ ನೆನೆಗುದಿಗೆ ಬಿದ್ದಿದ್ದು ಅರಣ್ಯ ಇಲಾಖೆ ವತಿಯಿಂದ ಪರಿಣಾಮಕಾರಿಯಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು .ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಿ ಭೂಮಿ ಪಡೆದು ಆನೆ ಕಾರಿಡಾರ್ ಮಾಡಲೇಬೇಕು ಎಂದು ಹೇಳಿದರು.
ಅರಣ್ಯ ಇಲಾಖೆ ಅಧಿಕಾರಿಗಳು ಜನರ ಮುಂದೆ ಆನೆಕಾರಿಡಾರ್ ಸ್ಥಾಪನೆ ಆಗವುದೋ ಇಲ್ಲವೋ ಎಂಬುವುದನ್ನು ಸ್ಪಷ್ಟವಾಗಿ ತಿಳಿಸಬೇಕು ಎಂದು ಪ್ರಜ್ವಲ್ ರೇವಣ್ಣ ಅವರು ಹೇಳಿದರು.
ಸಕಲೇಶಪುರ ,ಅಲೂರು ಬೇಲೂರು ತಾಲ್ಲೂಕುಗಳಲ್ಲಿ ಆನೆ ಆವಾಸ ಹಾಗೂ ಅರಣ್ಯ ವಿಸ್ತರಣೆ ಯೋಜನೆಗೆ ಪೂರಕವಾಗಿಲ್ಲ ಎಂಬುದನ್ನು ಈಗಾಗಲೇ ಅಧ್ಯಯನ ಸಂಸ್ಥೆಗಳು ತಿಳಿಸಿವೆ. ಆರಣ್ಯ ಇಲಾಖೆ ಅವುಗಳನ್ನು ಅರಿತು ಪೂರಕ ಯೋಜನೆಗಳ ಅನುಷ್ಠಾನ ನಡೆಸಬೇಕು ಎಂದು ಲೋಕಸಭಾ ಸದಸ್ಯರು ಹೇಳಿದರು.
ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ ಒದಗಿಸಿ.ಅರಣ್ಯ ಹಾಗೂ ಹಣಕಾಸು ಸಚಿವಾಲಯದ ಸದಸ್ಯರು ಅಧಿಕಾರಿಗಳ ಜಂಟಿ ಸಭೆ ಆಯೋಜಿಸಿ .ಸಂಪೂರ್ಣ ತಡಗೋಡೆ ನಿರ್ಮಾಣಕ್ಕೆ 200 ಕೋಟಿü ಹಣ ಏಕ ಕಾಲದಲದಲಿ ನೀಡಿ ಕಾಮಗಾರಿ ಪೂರ್ಣಗೊಳಿಸಿ ಆನಂತರವೇ ಆನೆಗಳನ್ನು ಹಿಡಿದು ಸ್ಥಳಾಂತರಿಸಿ ಎಂದು ಅವರು ಒತ್ತಾಯಿಸಿದರು.
ಕಾಫಿ ಬೆಳೆಗಾರರಿಂದ ಪ್ರತಿ ವರ್ಷ ಕೇಂದ್ರ ಸರ್ಕಾರಕ್ಕೆ ಲಕ್ಷಾಂತರ ಕೋಟಿ ರೂ ಆದಾಯ ಬರುತ್ತಿದೆ ಆದರೆ ಬೆಳೆಗಾರರು ಬಸವಳಿದಿದ್ದಾರೆ ಹಾಗಾಗಿ 400-600 ಕೋಟಿ ರೂ ಹಣವನ್ನು ರೈತರಿಗೆ ಪ್ಯಾಕೇಜ್ ರೂಪದಲ್ಲಿ ನೀಡಿ 7 ವರ್ಷಗಳ ಕಾಲ ಬಡ್ಡಿ ರಹಿತ ಸಾಲ ವಿತರಿಸಿ ನೆರವಾಗಿ ಎಂದು ಪ್ರಜ್ವಲ್ ರೇವಣ್ಣ ಹೇಳಿದರು.

ಸಭೆಯಲ್ಲಿ ಶಾಸಕರಾದ ಹೆಚ್.ಕೆ ಕುಮಾರಸ್ವಾಮಿ, ಕೆ.ಎಸ್.ಲಿಂಗೇಶ್, ಮಾಜಿ ಶಾಸಕರಾದ ಹೆಚ್.ಎಂ ವಿಶ್ವನಾಥ್ ಅವರು ಮಾತನಾಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ಆನೆ ಕಾರಿಡಾರ್ ನಿರ್ಮಾಣಕ್ಕೆ ಗಂಭೀರ ಪ್ರಯತ್ನ ಆಗಬೇಕಿದೆ ಎಂದರು.

ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ನಾಶವಾಗುತ್ತಿದೆ ಮಲೆನಾಡಿನ ಜನರು ಅದರ ಪರಿಣಾಮ ಎದುರಿಸಬೇಕಾಗಿದೆ ಎಂದ ಅವರು ಈ ಭಾಗದಲ್ಲಿ ನಿರಂತರವಾಗಿ ಮುಂದುವರೆದಿರುವ ಆನೆ ಹಾವಳಿ, ಸ್ಥಳೀಯರ ಸಂಕಷ್ಟ ,ಅವೈಜ್ಞಾನಿಕ ಬೆಳೆ ಪರಿಹಾರಗಳ ಬಗ್ಗೆ ಸಚಿವರ ಗಮನ ಸೆಳೆದರು.
ಆನೆಗಳನ್ನು ಸಂಪೂರ್ಣವಾಗಿ ಬೆರೆಡೆಗೆ ಸ್ಥಳಾಂತರ ಮಾಡಿ,ಕಂದಕ ನಿರ್ಮಾಣ ಮಾಡಿ ರೈಲ್ವೆ ಹಳಿ ಬಳಸಿ ತಡೆಗೋಡೆ ಮಾಡಿ ಎಂದು ,ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿ ಆನೆ ನಿಯಂತ್ರಣಕ್ಕೆ ವೈಜ್ಞಾನಿಕವಾಗಿ ಪ್ರಯತ್ನ ನಡೆಸಿ ಎಂದು ಶಾಸಕರಾದ ಹೆಚ್.ಕೆ ಕುಮಾರಸ್ವಾಮಿ, ಕೆ.ಎಸ್.ಲಿಂಗೇಶ್, ಮಾಜಿ ಶಾಸಕರಾದ ಹೆಚ್.ಎಂ ವಿಶ್ವನಾಥ್ ಒತ್ತಾಯ ಮಾಡಿದರು.
ಕಾಫಿ ಬೆಳೆಗಾರರ ಒಕ್ಕೂಟದ ಪ್ರತಿನಿಧಿಗಳಾದ ತೋ.ಚ. ಅನಂತ ಸುಬ್ಬರಾಯರು ಹಾಗೂ ತೀರ್ಥ ಮಲ್ಲೇಶ್ ಅವರು ತಮ್ಮ ಮನವಿ ಅರ್ಪಿಸಿ ಮಾತನಾಡಿದರು.

ಬೆಕ್ಕನಹಳ್ಳಿ ನಾಗರಾಜ್ ,ಕಣದಳ್ಳಿ ಮಂಜಣ್ಣ,ಬಾಳ್ಳುಗೋಪಾಲ್ ಹಾಗೂ ರೈತ ಸಂಘ,ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಬೆಳೆಗಾರರ ಪರ ಮಾತನಾಡಿ ಸ್ಥಳೀಯ ಸಮಸ್ಯೆಗಳ ಬಗ್ಗೆ ಸಚಿವರ ಗಮನಕ್ಕೆ ತಂದರು.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ವಿಜಯ ಕುಮಾರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಶಂಕರ್ ಪಿ, ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜು, ಸಾಮಾಜಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪವi ,ತಾ.ಪಂ ಅಧ್ಯಕ್ಷರಾದ ಶ್ವೇತಾ ಪ್ರಸನ್ನ ಹಾಗೂ ಇನ್ನಿತರ ಅಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here