ಶಾಸಕರಾದ ಕೆ ಎಸ್ ಲಿಂಗೇಶ್ ರವರು ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಗೋಪಾಲಯ್ಯ ರವರು ಹಳೇಬೀಡಿನ ದ್ವಾರ ಸಮುದ್ರದ ಕೆರೆ ಏರಿ ಕುಸಿದಿರುವುದರಿಂದ ಸ್ಥಳಕ್ಕೆ ಆಗಮಿಸಿದ ಶಾಸಕರು, ಸಚಿವರು ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳಿಗೆ ತಿಳಿಸಿ ತ್ವರಿತವಾಗಿ ಕಾಮಗಾರಿಯನ್ನು ನಡೆಸುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗಿರೀಶ್ ರವರು, ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀನಿವಾಸ್ ಗೌಡ ರವರು, ಎ ಸಿ ಗಿರೀಶ್ ನಂದನ್, ತಹಸೀಲ್ದಾರ್ ನಟೇಶ್, ಇ ಇ ಓ ರವಿಕುಮಾರ್, ಸಿಪಿಐ ಸಿದ್ಧರಾಮೇಶ್, ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಸತೀಶ್, ಸಂತೋಷ್, ಸ್ಥಳೀಯ ಮುಖಂಡರು, ಪ್ರಮುಖರು ಉಪಸ್ಥಿತರಿದ್ದರು.