ಎತ್ತಿನಹೊಳೆ ಯೋಜನೆಯ ಕುರಿತು ಹಾಸನದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ, ಈ ಯೋಜನೆ ಕಾಮಗಾರಿಯ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಿ.ಕೆ‌‌.ಶಿವಕುಮಾರ್ .

0

ಪಶ್ಚಿಮಘಟ್ಟದಿಂದ ಕೋಲಾರದವರೆಗೆ ನೀರನ್ನು ಹರಿಸುವ ಯೋಜನೆಯನ್ನು ತಯಾರು ಸುಮಾರು 24 ಸಾವಿರ ಕೋಟಿ ರೂಪಾಯಿ ವೆಚ್ಚದ ಯೋಜನೆ ಇದಾಗಿದ್ದು, ಈಗಾಗಲೇ 14 ಸಾವಿರ ಕೋಟಿ ರೂಪಾಯಿ ಯೋಜನೆಗಾಗಿ ಖರ್ಚು ಮಾಡಲಾಗಿದೆ. ಈ ಯೋಜನೆಯ ಕಾಮಗಾರಿಯ ಪ್ರಗತಿ ಪರಿಶೀಲನೆ ವೇಳೆ ಕೆಲವು ವಿಷಯಗಳು ಡಿ.ಕೆ‌‌‌.ಶಿವಕುಮಾರ್ ಅವರ ಗಮನಕ್ಕೆ ಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಮ್ಮದೇ ಕಾನೂನುಗಳನ್ನು ರೂಪಿಸುತ್ತಿದ್ದಾರೆ ಎನ್ನುವ ದೂರುಗಳು ಕೇಳಿ ಬಂದಿವೆ . ತಕ್ಷಣವೇ ಈ ಕುರಿತು ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳುತ್ತೇನೆ.

ಅರಣ್ಯ ವ್ಯಾಪ್ತಿಯಲ್ಲಿ ಈ ಯೋಜನೆಯ ಕಾಮಗಾರಿ ನಡೆಯುತ್ತಿದ್ದು, ಅರಣ್ಯ ಇಲಾಖೆಯವರು ಕಾಮಗಾರಿಗೆ ಸಹಕರಿಸುವುದಾಗಿ ಒಪ್ಪಿಗೆ ಸೂಚಿಸಿದ್ದಾರೆ. ಆದಷ್ಟು ಬೇಗ ಈ ಯೋಜನೆ ಪೂರ್ಣಗೊಳಿಸಲು ನಮ್ಮ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ತಿಳಿಸಿದೆ ಎಂದರು.

LEAVE A REPLY

Please enter your comment!
Please enter your name here