ಕರಾಸ್ಪಂಡನ್ಸ್ ಕೋರ್ಸ್‍ಗಳಿಗೆ ಆನ್‍ಲೈನ್ ಪ್ರವೇಶಾತಿ ಪ್ರಾರಂಭ

0

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತ ಗಂಗೋತ್ರಿ ವತಿಯಿಂದ ಹಾಸನ ಪ್ರಾದೇಶಿಕ ಕೇಂದ್ರದಲ್ಲಿ 2020-21 ನೇ ಸಾಲಿನ ಶ್ಯೆಕ್ಷಣಿಕ ವರ್ಷದ ಜುಲೈ ಆವೃತ್ತಿಯ ಪ್ರಥಮ, ದ್ವಿತೀಯ, ತೃತೀಯ ವರ್ಷದ ಬಿ.ಎ., ಬಿ.ಕಾಂ, ಬಿ.ಎಲ್.ಐ.ಸಿ, ಪ್ರಥಮ, ಅಂತಿಮ ಎಂ.ಎ.(ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಪ್ರಾಚೀನ ಇತಿಹಾಸ ಹಾಗೂ ಪುರಾತತ್ವ ಅಧ್ಯಯನ, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಸಾರ್ವಜನಿಕ ಆಡಳಿತ, ಪತ್ರಿಕೋದ್ಯಮ), ಎಂ.ಕಾಂ, ಎಂ.ಎಲ್.ಐ.ಸಿ, ಎಂ.ಎಸ್ಸಿ, ಎಂ.ಬಿ.ಎ, ಡಿಪ್ಲೋಮ, ಪಿ.ಜಿ. ಡಿಪ್ಲೋಮ ಹಾಗೂ ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಆನ್‍ಲೈನ್ ಪ್ರವೇಶಾತಿ ಪ್ರಕ್ರಿಯೆಯು ಪ್ರಾರಂಭವಾಗಿರುತ್ತದೆ. ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿರುವ ಮಹಿಳಾ ವಿದ್ಯಾರ್ಥಿನಿಯರಿಗೆ ಬೋಧನಾ ಶುಲ್ಕದಲ್ಲಿ ಶೇ. 25 ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಪ್ರವೇಶಾತಿಯು ದಂಡ ಶುಲವಿಲ್ಲದೆ ಅ.29 ಅಂತಿಮವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕ.ರಾ.ಮು.ವಿ.ಯ ವೆಬ್‍ಸೈಟ್‍ನಿಂದ ಪಡೆಯಬಹುದಾಗಿದೆ. www.ksoumysore.ac.in ಕ.ರಾ.ಮು.ವಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾದ ಡಾ. ಪಿ.ಹರೀಶ್ ದೂರವಾಣಿ ಸಂಖ್ಯೆ:9482603060, 8904036090, 8792017803 ಸಂಪರ್ಕಿಸಬಹುದಾಗಿದೆ ಎಂದು ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here