ಕಾಮಗಾರಿಗಳ ವಿಳಂಬಕ್ಕೆ ದಂಡ ವಿಧಿಸಲು ಜಿಲ್ಲಾಧಿಕಾರಿ ಸೂಚನೆ

0

ನಗರದ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಕೆಲಸ ನಿಧಾನ ಗತಿಯಲ್ಲಿದ್ದರೆ ಪ್ರಗತಿಯ ಹಂತವಾರು ದಂಡ ವಿಧಿಸುವಂತೆ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ಜಿಲ್ಲಾಧಿಕಾರಿಯವರ ಕಚೇರಿಯಲ್ಲಿಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ಬಾಕಿ ಉಳಿದಿರುವ ಕಾಮಗಾರಿಗಳ ಟೆಂಡರ್ ಕರೆದು ಗುಣಮಟ್ಟದ ಸಲಕರಣೆಗಳನ್ನು ಬಳಸಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸೂಚಿಸಿ ನೀಡುವಂತೆ ತಿಳಿಸಿದರು.

ನಗರ ಪ್ರದೇಶದ ಕುಡಿಯುವ ನೀರು ಒದಗಿಸುವಲ್ಲಿ ಯಾವುದಾದರೂ ಸಮಸ್ಯೆಗಳಿದ್ದಲ್ಲಿ ಪರ್ಯಾಯ ಕ್ರಿಯಾಯೋಜನೆ ಮಾಡಿ ನೀರು ಒದಗಿಸುವಂತೆ ಹಾಗೂ ಬಾಕಿ ಇರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.

ಆಲೂರು ತಾಲೂಕಿನಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಸೂಕ್ತ ನಿವೇಶನ ಗುರುತಿಸುವಂತೆ ಹಾಗೂ ಕರ ವಸೂಲಾತಿ ಕಡಿಮೆಯಾಗಿದ್ದು ಎಲ್ಲರಿಗೂ ನೋಟಿಸ್ ಜಾರಿ ಮಾಡಿ ಶೀಘ್ರವೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ಘನ ತ್ಯಾಜ್ಯ ವಿಲೇವಾರಿಗೆ ಎಲ್ಲ ತಾಲ್ಲೂಕುಗಳಲ್ಲಿಯೂ ಇಲಭ್ಯವಿರುವ ಸೂಕ್ತ ಸ್ಥಳಾವಕಾಶದ ಬಗ್ಗೆ ಮಾಹಿತಿ ಪಡೆದ ಅವರು ಘನ ತ್ಯಾಜ್ಯ ಹಾಗೂ ಮಾರುಕಟ್ಟೆ ತ್ಯಾಜ್ಯವನ್ನು ಪ್ರತ್ಯೇಕಿಸಿ ಹೆಚ್ಚಿನ ಗೊಬ್ಬರದ ತಯಾರು ಮಾಡುವಂತೆ ಹಾಗೂ ಎಷ್ಟು ಟನ್ ಮಾರಾಟ ಮಾಡಲಾಗಿದೆ ಮತ್ತು ಗಳಿಸಿದ ಹಣದ ಬಗ್ಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಸೂಚಿಸಿದರು.

ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಬಳಸುತ್ತಿರುವವರನ್ನು ಪತ್ತೆ ಹಚ್ಚಿ ದಂಡ ವಿಧಿಸಿ ಕಟ್ಟುನಿಟ್ಟಿನ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಘನತ್ಯಾಜ್ಯ ವಿಲೇವಾರಿಗೆ ಹೆಚ್ಚಿನ ವಾಹನಗಳ ಅವಶ್ಯಕತೆ ಇದ್ದಲ್ಲಿ ಖರೀದಿಸುವಂತೆಅವರು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ನಿರ್ದೇಶಿಸಿದ್ದರು.

ಪೌರ ಕಾರ್ಮಿಕರಿಗೆ ಗೃಹ ಭಾಗ್ಯದಲ್ಲಿ ಮನೆ ನಿರ್ಮೀಸಲು ಎಲ್ಲಾ ತಾಲ್ಲೂಕುಗಳಲ್ಲಿಯೂ ನಿವೇಶನ ಗುರುತಿಸಿ ಅತ್ಯವಿದ್ದರೆ ಖಾಸಗಿಯವರಿಂದಲೂ ಖರೀದಿಸುವಂತೆ ಸೂಚಿಸಿದರಲ್ಲದೇ, ನಂತರ ಪೌರಕಾರ್ಮಿಕರ ಹೆಸರಿಗೆ ಹಕ್ಕು ಪತ್ರ ನೀಡುವಂತೆ ಅವರು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ಸೂಚಿಸಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಿ.ಎ. ಜಗದೀಶ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಅಭಿಯಂತರರಾದ ಬಿ.ಎಸ್. ಮಂಜುನಾಥ್, ಕಾರ್ಯ ಪಾಲಕ ಅಭಿಯಂತರರಾದ ಶಿವಾನಂದ್, ಹಾಗೂ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಜರಿದ್ದರು.
********

LEAVE A REPLY

Please enter your comment!
Please enter your name here