ಕೊರೊನಾಗೆ ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ಬಲಿ

0

ಹಿರಿಯ ಪತ್ರಕರ್ತ, ಮುಖ್ಯಮಂತ್ರಿಗಳ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್(65) ಕೊರೊನಾಗೆ ಬಲಿಯಾಗಿದ್ದಾರೆ.

10 ದಿನಗಳ ಹಿಂದೆ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಮಹಾದೇವ ಪ್ರಕಾಶ್ ಇಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಈ ಭಾನುವಾರ ಪತ್ರಿಕೆಯ ಸಂಪಾದಕರಾಗಿದ್ದ ಮಹಾದೇವ ಪ್ರಕಾಶ್ ಮಾಧ್ಯಮ ವಲಯದಲ್ಲಿ ರಾಜಕೀಯ ವಿಶ್ಲೇಷಕರಾಗಿ ಗುರುತಿಸಿಕೊಂಡಿದ್ದರು. ವಿದ್ಯುನ್ಮಾನ ಮಾಧ್ಯಮಗಳಲ್ಲಿ ಅತಿಥಿಯಾಗಿ ಮತ್ತು ಪತ್ರಿಕೆಗಳಲ್ಲಿ ರಾಜಕೀಯ ವಿಷಯಗಳಿಗೆ ಸಂಬಂಧಿಸಿದಂತೆ ಅಂಕಣಗಳನ್ನು ಮಹಾದೇವ ಪ್ರಕಾಶ್ ಬರೆಯುತ್ತಿದ್ದರು.

LEAVE A REPLY

Please enter your comment!
Please enter your name here