ಕೋವಿಡ್ ಪರೀಕ್ಷೆ ತ್ವರಿತಗೊಳಿಸುವಂತೆ ಜಿಲ್ಲಾಧಿಕಾರಿ ಸೂಚನೆ

0

ಚನ್ನರಾಯಪಟ್ಟಣ ತಾಲ್ಲೂಕಿನ ಹಿರೇಸಾವೆ ಹಾಗೂ ನುಗ್ಗೇಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಭೇಟಿ ನೀಡಿ ಪರಿಶೀಲಿಸಿ ಕೋವಿಡ್-19 ತಡೆಗಟ್ಟಲು ಪರೀಕ್ಷೆಗಳನ್ನು ತ್ವರಿತಗೊಳಿಸುವಂತೆ ಹಾಗೂ ಕೋವಿಡ್ ಪರೀಕ್ಷೆಗೆ ತಾಲ್ಲೂಕುವಾರು ನೀಡಿರುವ ನಿರ್ಧಿಷ್ಟ ಗುರಿಗಳನ್ನು ಸಾಧಿಸುವಂತೆ ಆರೋಗ್ಯಾಧಿಕಾರಿಗಳಿಗೆ ಹಾಗೂ ಇತರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಶಾಸಕರಾದ ಸಿ.ಎನ್. ಬಾಲಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ತಹಶೀಲ್ದಾರ್ ಮಾರುತಿ ಹಾಗೂ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here