ಗಣರಾಜೋತ್ಸವ ಆಚರಣೆ: ಪೂರ್ವ ಸಿದ್ದತೆಗೆ ಜಿಲ್ಲಾಧಿಕಾರಿ ಸೂಚನೆ

0

ಗಣರಾಜ್ಯೋತ್ಸವವನ್ನು ಜ.26 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲು ಸಿದ್ದತೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಗಣರಾಜ್ಯೋತ್ಸವ ಆಚರಣೆ ಕುರಿತು ನಡೆದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿ ಆಹ್ವಾನ ಪತ್ರಿಕೆ ಮುದ್ರಣ, ಗಣ್ಯರಿಗೆ ಆಹ್ವಾನ, ವೇದಿಕೆ ಸಿದ್ದತೆ ಹಾಗೂ ಧ್ವಜಾರೋಹಣಕ್ಕೆ ಕ್ರಮವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಕ್ರೀಡಾಂಗಣ ಸ್ವಚ್ಚತೆಗೆ ಕ್ರಮಕೈಗೊಳ್ಳುವಂತೆ ನಗರ ಸಭೆ ಆಯುಕ್ತರಿಗೆ ಸೂಚಿಸಿದಲ್ಲದೆ ಕಾರ್ಯಕ್ರಮದ ಸಂದರ್ಭದಲ್ಲಿ ಧೂಳೆಳದಂತೆ ನೀರು ಸಿಂಪಡಣೆಗೆ ಕ್ರಮ ಕೈಗೊಳ್ಳವಂತೆ ಸೂಚಿಸಿದರು.

ಧ್ವಜರೋಹಣದ ನಂತರ ಜಿಲ್ಲಾ ಕ್ರೀಡಾಂಗಣದಲ್ಲಿ ಸಾಂಸ್ಕತಿಕ ಕಾರ್ಯಕ್ರಮ ಆಯೋಜನೆಗೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚಿಸಿದ ಅವರು ದೇಶ ಭಕ್ತಗೀತೆಗೆ ಅನುಗುಣವಾಗಿ ನೃತ್ಯರೂಪಕ, ಡೋಳ್ಳು ಕುಣಿತ ಹಾಗೂ ವೀರಗಾಸೆ ಕಾರ್ಯಕ್ರಮವನ್ನು ಕಲಾ ತಂಡಗಳಿಂದ ಆಯೋಜಿಸುವಂತೆ ತಿಳಿಸಿದರು.

ಧ್ವಜ ಸ್ತಂಭದ ಸುತ್ತ ಅಲಂಕಾರಿಕ ಹೂವಿನ ಕುಂಡಗಳನ್ನಿಡಲು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಕ್ರಮವಹಿಸುವಂತೆ ಸೂಚಿಸಿದರು. ಪಥ ಸಂಚಲನದಲ್ಲಿ ಪೊಲೀಸ್ ಇಲಾಖೆ, ಅಗ್ನಿ ಶಾಮಕ ದಳ, ಗೃಹರಕ್ಷಕ ದಳ ಜೊತೆಗೆ ಮಾಜಿ ಸೈನಿಕರ ತಂಡವು ಭಾಗವಹಿಸುಂತೆ ಜಿಲ್ಲಾಧಿಕಾರಿ ತಿಳಿಸಿದರು.

ಗಣರಾಜ್ಯೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸಿ ಸನ್ಮಾನಿಸಲು ಸಮಾಜಸೇವೆ, ಮಕ್ಕಳಿಗೆ ಶೌರ್ಯ ಪ್ರಶಸ್ತಿ, ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿರುವ ಕ್ರೀಡಾಪಟುಗಳು, ವಿಕಲಚೇತನರ ಕ್ರೀಡಾ ಪಟು, ಕೋವಿಡ್ ವಾರಿಯರ್ಸ್, ಪತ್ರಕರ್ತರನ್ನ ಪರಿಗಣಿಸಿ ಉಪ ಸಮಿತಿಯಲ್ಲಿ ಪರಿಶೀಲಿಸಿ ಕ್ರಮ ವಹಿಸುವಂತೆ ಸೂಚಿಸಿದರು.

ಕೃಷಿ, ತೋಟಗಾರಿಕೆ, ಆರೋಗ್ಯ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಮತ್ತಿತರ ಇಲಾಖೆಗಳಿಂದ ಸ್ತಬ್ದಚಿತ್ರ ಮಾಡುವಂತೆ ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಎಲ್ಲಾ ಸರ್ಕಾರಿ ಕಚೇರಿ ಕಟ್ಟಡಗಳಿಗೆ ದೀಪಾಲಂಕಾರವನ್ನು ಆಯಾಯ ಇಲಾಖೆಯಿಂದಲೇ ಮಾಡಿಸಲು ತಿಳಿಸಿದ ಜಿಲ್ಲಾಧಿಕಾರಿಯವರು ನಗರಸಭೆ ವತಿಯಿಂದ ನಗರದ 4 ಕಡೆಗಳಲ್ಲಿ ಗಣರಾಜ್ಯೋತ್ಸವ ಶುಭಾಶಯ ಕುರಿತು ಎಲ್.ಇ.ಡಿ. ಬೋರ್ಡ್ ಅಳವಡಿಕೆಗೆ ಕ್ರಮವಹಿಸುವಂತೆ ತಿಳಿಸಿದರು. ಚೆಸ್ಕಾಂನವರು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗದಂತೆ ನಿಗಾವಯಿಸಿ ಎಂದು ಸೂಚಿಸಿದರು.

ಗಣರಾಜ್ಯೋತ್ಸವದ ಸಂದೇಶ ಸಿದ್ಧಪಡಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯ ಈ ವರ್ಷದ ಸಾಧನೆ ಕುರಿತು ಮಾಹಿತಿಯನ್ನು ಜ.15ರೊಳಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ನೀಡುವಂತೆ ಜಿಲ್ಲಾಧಿಕಾರಿ ಆರ್ ಗಿರೀಶ್ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್. ನಂದಿನಿ ಉಪವಿಭಾಗಾಧಿಕಾರಿಗಳಾದ ಬಿ.ಎ ಜಗದೀಶ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೃಷ್ಣೇಗೌಡ, ಸ್ವಾತಂತ್ರ ಹೋರಾಟಗಾರರಾದ ಹೆಚ್.ಎಂ.ಶಿವಣ್ಣ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪ್ರಸನ್ನಕುಮಾರ್ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here