ಗಾಂಧಿ ಭವನ: ಜಿಲ್ಲಾಧಿಕಾರಿಯವರಿಂದ ಪರಿಶೀಲನೆ

0

ನಗರದಲ್ಲಿ ನಿರ್ಮಾಣವಾಗುತ್ತಿರುವ ಗಾಂಧಿ ಭವನ ನೂತನ ಕಟ್ಟಡಕ್ಕೆ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿ, ಹಲವಾರು ಸಲಹೆ ಸೂಚನೆಗಳನ್ನು ನೀಡಿದರು.

ಆದಷ್ಟು ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ವಿನೋದ್ ಚಂದ್ರ, ನಿರ್ಮಿತಿ ಕೇಂದ್ರದ ಅಧಿಕಾರಿಗಳಾದ ರಾಮಕೃಷ್ಣೇಗೌಡ, ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್. ಎಂ. ಶಿವಣ್ಣ ಹಾಗೂ ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಹರೀಶ್ ಹಾಜರಿದ್ದರು.

LEAVE A REPLY

Please enter your comment!
Please enter your name here