ಗೋಹತ್ಯೆ ನಿಷೇಧ ಕಾನೂನು ಏನು ಹೇಳುತ್ತದೆ?: ಗೋಮಾತೆ ಮುಟ್ಟಿದರೆ ಏನು ಶಿಕ್ಷೆ?

0

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ 2020ಕ್ಕೆ ರಾಜ್ಯ ವಿಧಾನಸಭೆ ಅಂಗೀಕಾರ ನೀಡಿದೆ. ಈ ಮೂಲಕ ರಾಜ್ಯ ಸರ್ಕಾರ ಗೋಹತ್ಯೆ ನಿಷೇಧಿಸುವ ತನ್ನ ವಾಗ್ದಾನವನ್ನು ಈಡೇರಿಸಿದೆ. ಈ ಮೂಲಕ ಗೋವು ಸಂತತಿ ಉಳಿಸಬೇಕು ಎಂಬ ಹಲವರ ಕೂಗಿಗೆ ರಾಜ್ಯ ಸರ್ಕಾರ ಧ್ವನಿಯಾಗಿದೆ.

ಇನ್ನು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ 2020ರಲ್ಲಿ ಇರುವ ಅಂಶಗಳನ್ನು ಗಮನಿಸುವುದಾದರೆ…
* ಹಸು, ಕರು, ಎಮ್ಮೆ, ಎತ್ತು ಹಾಗೂ 13 ವರ್ಷ ಕೆಳಗಿನ ಕೋಣ ಹತ್ಯೆ ನಿಷೇಧ
* ಪ್ರತಿ ಗೋ ಹತ್ಯೆಗೆ 50,000 ರೂ. ದಿಂದ ಗರಿಷ್ಠ ಐದು ಲಕ್ಷ ರೂ.ವರೆಗೆ ದಂಡ
* ಕಾನೂನು ಉಲ್ಲಂಘಿಸಿ ಗೋಹತ್ಯೆ ಮಾಡಿದರೆ 3 ರಿಂದ 7 ವರ್ಷದ ವರೆಗೆ ಜೈಲು ಶಿಕ್ಷೆ
* ಪುನರಾವರ್ತಿತ ಅಪರಾಧಕ್ಕೆ 1 ಲಕ್ಷ ರೂ.ದಿಂದ 10 ಲಕ್ಷ ರೂ.ವರೆಗೆ ದಂಡ ಹಾಗೂ ಏಳು ವರ್ಷ ಜೈಲು ಶಿಕ್ಷೆ
*ಗೋ ಹತ್ಯೆ ಉದ್ದೇಶಕ್ಕಾಗಿ ಅಂತರಾಜ್ಯ ಹಾಗೂ ರಾಜ್ಯದೊಳಗಡೆ ಗೋ ಸಾಗಾಟ ನಿಷೇಧ
*ಕೃಷಿ ಹಾಗೂ ಪಶುಸಂಗೋಪನೆ ಉದ್ದೇಶಕ್ಕಾಗಿ ಗೋವು ಸಾಟಕ್ಕೆ ಅಧಿಕಾರಿಗಳ ಅನುಮತಿ ಅಗತ್ಯ
*ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಸಾಗಾಟ ಮಾಡಬೇಕು
*ಗೋವು ಸಾಗಾಣಿಕೆ ಕುರಿತಂತೆ ಕೇಂದ್ರದ ನಿಯಮಗಳನ್ನು ಉಲ್ಲಂಘಿಸಿದರೆ ಮೂರು ವರ್ಷದಿಂದ ಐದು ವರ್ಷದ ವರೆಗೆ ಜೈಲು ಶಿಕ್ಷೆ ಹಾಗೂ ಐವತ್ತು ಸಾವಿರ ರೂ. ದಂಡ
*ಎಸ್‌ಐ ಶ್ರೇಣಿ ಹಾಗೂ ಅದಕ್ಕಿಂತ ಮೇಲ್ಪಟ್ಟ ಅಧಿಕಾರಿಗಳು ತಪಾಸಣೆ ಹಾಗೂ ಮುಟ್ಟುಗೋಲು ಮಾಡಲು ಕಾಯ್ದೆಯಲ್ಲಿ ಅಧಿಕಾರ
*ಅಧಿಕಾರಿಗಳು ಮುಟ್ಟುಗೋಲು ಹಾಕಿದ ಕೂಡಲೇ ಸಂಬಂಧಿತ ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ಗೆ ಈ ಕುರಿತು ವರದಿ ಮಾಡಬೇಕು
*ಗೋವು ಹತ್ಯೆಗೆ ಸಂಬಂಧಿಸಿದಂತೆ ಸಾಗಾಟ ಮಾಡಿದ ವಾಹನಗಳು ಹಾಗೂ ಇತರ ಸಲಕರಣೆಗಳನ್ನು ಆರೋಪಿಗೆ ಹಿಂದುರಿಗಿಸಲು ಬ್ಯಾಂಕ್ ಗ್ಯಾರಂಟಿ ನೀಡಬೇಕು
*ಗೋಹತ್ಯೆ ಪ್ರಕರಣಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ರಚನೆಗೆ ಅಧಿಕಾರ

LEAVE A REPLY

Please enter your comment!
Please enter your name here