ಜವಾಹರ್ ನವೋದಯ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

0

ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆಯಲ್ಲಿರುವ ಜವಾಹರ್ ನವೋದಯ ವಿದ್ಯಾಲಯಕ್ಕೆ 6ನೇ ತರಗತಿಗೆ 2021-22ನೇ ಏಪ್ರಿಲ್ ಸಾಲಿನಲ್ಲಿ ಸೇರಬಯಸುವ, ಹಾಸನ ಜಿಲ್ಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ಪ್ರವೇಶ ಪರೀಕ್ಷೆಗೆ ಅರ್ಜಿಗಳನ್ನು ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದೆ.
ಪರೀಕ್ಷೆ 10ನೇ ಏಪ್ರಿಲ್ 2021ರಂದು ಶನಿವಾರ ಆಯಾ ತಾಲ್ಲೂಕಿನ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಜಿಲ್ಲೆಯಲ್ಲಿನ ಮಾನ್ಯತೆ ಪಡೆದ ಶಾಲೆಯ 5 ನೇ ತರಗತಿಯಲ್ಲಿ ಓದುತ್ತಿರುವ ಹಾಗೂ 2008ರ ಮೇ 1ರ ನಂತರ, 2012ರ ಏಪ್ರಿಲ್ 30ರ ಮೊದಲು ಜನಿಸಿದ ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗೆ ಅರ್ಹರಿರುತ್ತಾರೆ.ಶಾರೀರಿಕ ಅಂಗವಿಕಲತೆ ಹೊಂದಿದವರಿಗೆ ಶೇಕಡಾ 3 ರಷ್ಟು ಮೀಸಲಾತಿ ಇರುತ್ತದೆ.
ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಈ ವಿದ್ಯಾಲಯದಲ್ಲಿ 6ನೇ ತರಗತಿಯಿಂದ 12ನೇ ತರಗತಿಯವರೆಗೆ ವ್ಯಾಸಂಗ ಮಾಡಬಹುದು ಮತ್ತು ವ್ಯಾಸಂಗ ಮಾಡುವ ಮಕ್ಕಳಿಗೆ ಉಚಿತ ವಸತಿ ಮತ್ತು ಸಹ ಶಿಕ್ಷಣ, ಬಾಲಕ- ಬಾಲಕಿಯರಿಗೆ ಬೇರೆ-ಬೇರೆ ವಸತಿ ಗೃಹಗಳು, ಆಹಾರ ವ್ಯವಸ್ಥೆ, ಕ್ರೀಡೆ ಮತ್ತು ವ್ಯಾಯಾಮ, ಆರೋಗ್ಯಕರ ವಾತಾವರಣದ ವ್ಯವಸ್ಥೆಯನ್ನು ಕಲ್ಪಿಸಲಾಗುವುದು.
www.navodaya.gov.in ನ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರನ್ನು ಅಥವಾ ದೂರವಾಣಿ ಸಂಖ್ಯೆ 08175-265429ಗೆ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here