ಡಿಸೆಂಬರ್ 8ರ ಭಾರತ್ ಬಂದ್ : ಏನಿರುತ್ತೆ, ಏನಿರಲ್ಲ?

0

ಡಿಸೆಂಬರ್ 8ರ ಭಾರತ್ ಬಂದ್ : ಏನಿರುತ್ತೆ, ಏನಿರಲ್ಲ?

ಕೇಂದ್ರ ಸರ್ಕಾರದ ವಿರುದ್ಧ ನವದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 10ನೇ ದಿನಕ್ಕೆ ಕಾಲಿಟ್ಟಿದೆ. ಡಿಸೆಂಬರ್ 8ರಂದು ‘ ಭಾರತ್ ಬಂದ್‌’ಗೆ ರೈತರು ಕರೆ ಕೊಟ್ಟಿದ್ದಾರೆ. ಕರ್ನಾಟಕದಲ್ಲಿಯೂ ಬಂದ್‌ ನಡೆಯಲಿದೆ.

ಕರ್ನಾಟಕದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಭಾರತ್ ಬಂದ್‌ಗೆ ಬೆಂಬಲ ಘೋಷಣೆ ಮಾಡಿವೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರ ಬೆಳಗ್ಗೆ 6 ರಿಂದ ಸಂಜೆ 6ರ ತನಕ ಬಂದ್ ನಡೆಯಲಿದೆ.

ಬೆಂಗಳೂರು ನಗರಕ್ಕೆ ಮಂಗಳವಾರ ಸುಮಾರು 10 ಸಾವಿರ ರೈತರು ಆಗಮಿಸಲಿದ್ದಾರೆ. ನಗರದಲ್ಲಿ ಬೃಹತ್ ಜಾಥಾ ನಡೆಸಲಿದ್ದು, ಸರ್ಕಾರದ ವಿರುದ್ಧ ಬಾರುಕೋಲು ಚಳವಳಿ ಮಾಡಲಿದ್ದಾರೆ. ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಘೋಷಣೆ ಮಾಡಿದ್ದಾರೆ.

ಬೆಂಗಳೂರು ನಗರಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿಗಳನ್ನು ಬಂದ್ ಮಾಡುವುದಾಗಿ ರೈತರು ಹೇಳಿದ್ದಾರೆ. ಕರ್ನಾಟಕದಲ್ಲಿ ಬಂದ್ ಬಿಸಿ ಜನರಿಗೆ ತಟ್ಟಲಿದೆ. ಆಟೋ, ಕ್ಯಾಬ್, ಲಾರಿ ಚಾಲಕರು ರೈತರಿಗೆ ಬೆಂಬಲ ನೀಡಿದ್ದಾರೆ.

LEAVE A REPLY

Please enter your comment!
Please enter your name here