ದೊಡ್ಡಗದ್ದವಳ್ಳಿ ಮಹಾಲಕ್ಷ್ಮಿ ದೇವಾಲಯಕ್ಕೇ ಲೋಕಸಭಾ ಸದಸ್ಯರಾದ ಪ್ರಜ್ವಲ್ ರೇವಣ್ಣ ಬೇಟಿ

0

ಹಾಸನ ಜಿಲ್ಲೆಯ ದೊಡ್ಡಗದ್ದವಳ್ಳಿ ಗ್ರಾಮದ ಚತುಷ್ಕೂಟ ಮಹಾಲಕ್ಷ್ಮಿ ದೇವಾಲಯದ ದಕ್ಷಿಣ ಗರ್ಭಗೃಹದಲ್ಲಿದ್ದ ಮಹಾಕಾಳಿ ಅಥವಾ ದಕ್ಷಿಣ ಭದ್ರಕಾಲಿ ಅಮ್ಮನವರ ವಿಗ್ರಹವು ಒಡೆದು ಹೋದ ಹಿನ್ನೆಲೆಯಲ್ಲಿ ಲೋಕಸಭಾ ಸದಸ್ಯರಾದ ಪ್ರಜ್ವಲ್ ರೇವಣ್ಣನವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತನಿಖೆಯನ್ನು ಸಮರ್ಪಕವಾಗಿ ನಡೆಸಿ ತಪ್ಪಿತಸ್ಥ ರನ್ನು ಶೀಘ್ರವೇ ಪತ್ತೆಮಾಡುವಂತೆ ಅವರು ಅಪರ ಪೋಲಿಸ್ ವರಿಷ್ಠಾಧಿಕಾರಿ ನಂದಿನಿ ಅವರಿಗೆ ಸೂಚನೆ ನೀಡಿದರು.ಪ್ರಮುಖ ದೇವಾಲಯಗಳಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಮಾಡಬೇಕು ಜೊತೆಗೆ ಅಗತ್ಯವಿರುವ ಕಡೆಗಳಲ್ಲಿ ಸಿ.ಸಿ ಕ್ಯಾಮರಾ ಅಳವಡಿಸುವಂತೆ ಅವರು ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಸ್ವರೂಪ್ , ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ನಾಗರಾಜ್,ಅಪರ ಪೋಲಿಸ್ ವರಿಷ್ಠಾಧಿಕಾರಿ ನಂದಿನಿ ಹಾಗೂ ಪೋಲಿಸ್ ಇಲಾಖೆ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here