ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಜಮೀರ್ ಅಹ್ಮದ್

0

ಅರಸೀಕೆರೆ : ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ವಸತಿ, ವಕ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೌಡರು ಮಗನ ಒತ್ತಡಕ್ಕೆ ಮಣಿದಿದ್ದಾರೆ. ರಾಜ್ಯಾಧ್ಯಕ್ಷರನ್ನು ಬಿಟ್ಟು ಮೈತ್ರಿ ಮಾಡಿಕೊಂಡಿದ್ದಾರೆ.ಇದಕ್ಕೆ ದೇವೇಗೌಡರು ಮನಸಾರೆ ಒಪ್ಪಿಲ್ಲ ಎಂದು ಹೇಳಿದರು. ರಾಜ್ಯದಲ್ಲೀಗ ಸೆಕ್ಯುಲರ್ ಪಾರ್ಟಿ ಉಳಿದಿರುವುದು ಕಾಂಗ್ರೆಸ್ ಒಂದೆ.

ಜನತಾದಳ ಸೆಕ್ಯುಲರ್ ಪಕ್ಷ ಅಂತ ಇತ್ತು. ಅದರಿಂದ ಕಾಂಗ್ರೆಸ್‌ಗೆ ಸ್ವಲ್ಪ ಹೊಡೆತ ಬೀಳುತ್ತಿತ್ತು. ಈಗ ನಮಗೇ ಅನುಕೂಲ ಎಂದರು. ಅವರ ಮೈತ್ರಿಯಿಂದ ನಮಗೆ ಪ್ಲಸ್ ಆಗುತ್ತೆ. ಜೆಡಿಎಸ್ ತೀರ್ಮಾನಕ್ಕೂ ನಮಗೂ ಸಂಬಂಧ ಇಲ್ಲ. ಅವರು ಏನಾದ್ರೂ ಮಾಡಿಕೊಳ್ಳಲಿ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here