ಬೇಲೂರು : ವೇಗವಾಗಿ ಚಲಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಐವರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಭೀರವಾಗಿದೆ , ಪಟ್ಟಣದ ಸಮೀಪ ಹಾರೋಹಳ್ಳಿ ತಿರುವಿನಲ್ಲಿ ಸೋಮವಾರ ಸಂಜೆ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಬೆಂಗಳೂರು ಮೂಲದವರು ಎಂದು ಗುರುತಿಸಲಾಗಿದೆ.
ಮೂಡಿಗೆರೆಯಿಂದ ಬೇಲೂರು ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಹಾರೋಹಳ್ಳಿ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದಿದ್ದರಿಂದ ಕಾರಿನೊಳಗಿದ್ದ ಒಬ್ಬನ ಕೈ ತುಂಡಾಗಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಮೂವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಕಾರು ಸಂಪೂರ್ಣ ಜಖಂಗೊAಡಿದ್ದು, ಒಳಗೆ ಸಿಲುಕಿದ್ದ ಗಾಯಾಳುಗಳನ್ನು ಸ್ಥಳೀಯರು ಹರಸಾಹಸಪಟ್ಟು ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಟ್ರಾಫಿಕ್ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟು ಪ್ರಕರಣ ದಾಖಲಿಸಿಕೊಂಡಿದ್ದಾರೆ.