ಮತದಾರರ ಪಟ್ಟಿ: ಲೋಪವಿದ್ದಲ್ಲಿ ಸರಿಪಡಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸೂಚನೆ

0

ಕರಡು ಮತದಾರರ ಪಟ್ಟಿ ಇಂದು ಪ್ರಕಟವಾಗಿದ್ದು ಯಾವುದೇ ಲೋಪವಿದ್ದಲ್ಲಿ ಅದನ್ನು ಡಿಸೆಂಬರ್ 17ರೊಳಗೆ ಸರಿಪಡಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಕರಡು ಮತದಾರರ ಪಟ್ಟಿ ಪ್ರಕಟಿಸುವ ಬಗ್ಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು ಜನವರಿ 2021ಕ್ಕೆ 18 ವರ್ಷ ತುಂಬುವ ಎಲ್ಲರೂ ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವಂತೆ ಚುನಾವಣಾ ತಹಸೀಲ್ದಾರ್ ಹಾಗೂ ಜನಪ್ರತಿನಿಧಿಗಳಿಗೆ ಅವರು ತಿಳಿಸಿದರು.
ಡಿ. 17 ರವರೆಗೆ ಬರುವ ನಾಲ್ಕು ಭಾನುವಾರಗಳಂದು ಮತಗಟ್ಟೆ ಅಧಿಕಾರಿ(ಬಿ.ಎಲ್.ಒ)ಗಳು ಕರ್ತವ್ಯ ನಿರ್ವಹಿಸುವರು. ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವವರು ನಿಗದಿತ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಬಹುದಾಗಿದೆ ಎಂದರು.
ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಆಕ್ಷೇಪಣೆ ಸಲ್ಲಿಸಲು ಬರುವ ವ್ಯಕ್ತಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕಟ್ಟುನಿಟ್ಟಿನ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚುನಾವಣಾ ತಹಸೀಲ್ದಾರ್ ಹೆಚ್.ಡಿ. ಪದ್ಮನಾಭ ಶಾಸ್ತ್ರಿ ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here