ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆ ಹೋಬಳಿಯ ಮತ್ತಿಘಟ್ಟ ಗ್ರಾಮದ ಕೆರೆಗೆ ಇಂದು ಆಹಾರ,ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಇಂದು ಕೆರೆಗೆ ಬಾಗಿನ ಅರ್ಪಿಸಿದರು.
ಕಾರ್ಯಕ್ರಮದಲ್ಲಿ ಹಾಸನ ಜಿಲ್ಲೆಯ ಲೋಕಸಭಾ ಸದ್ಯಸರಾದ ಪ್ರಜ್ವಲ್ ರೇವಣ್ಣ, ಶ್ರವಣಬೆಳಗೊಳ ಕ್ಷೇತ್ರದ ಶಾಸಕರಾದ ಸಿ.ಎನ್ ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಎಂ.ಎ ಗೋಪಾಲಸ್ವಾಮಿ, ತಾಲ್ಲೂಕ್ ಪಂಚಾಯಿತಿ ಅಧ್ಯಕ್ಷರಾದ ಶಾಮಲಾ ರಾಮಣ್ಣ,ವಿವಿಧ ಅಧಿಕಾರಿಗಳು, ಮತ್ತಿಘಟ್ಟ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಹಾಜರಿದ್ದರು.