ಮೊದಲ ಹಂತದ ಗ್ರಾ ಪಂ ಚುನಾವಣೆ ಸಕಲ ಸಿದ್ದತೆ

0

ಜಿಲ್ಲೆಯಲ್ಲಿ ನಾಲ್ಕು ತಾಲ್ಕೂಕುಗಳಲ್ಲಿ ಡಿ 22 ರಂದು ಗ್ರಾಮ ಪಂಚಾಯಿತಿಗಳಿಗೆ ಮೊದಲನೇ ಹಂತದ ಚುನಾವಣೆ ನಡೆಯುತ್ತಿದ್ದು, ಸಕಲ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಗ್ರಾಮ ಪಂಚಾಯಿತಿ ಚುನಾವಣೆ ಕುರಿತು ಮಾಹಿತಿ ನೀಡಿದ ಅವರು ಮತದಾನ ನಡೆಯುವ ಹಾಸನ , ಅರಕಲಗೂಡು, ಸಕಲೇಶಪುರ ಮತ್ತು ಚನ್ನರಾಯಪಟ್ಟಣ ತಾಲ್ಲೂಕುಗಳಲ್ಲಿ ಇಂದು ಮಸ್ಟರಿಂಗ್ ಕಾರ್ಯ ವ್ಯವಸ್ಥಿತವಾಗಿ ನಡೆದಿದ್ದು, ಎಲ್ಲಾ ಚುನಾವಣಾ ಅಧಿಕಾರಿ, ಸಿಬ್ಬಂದಿ ಮತ ಪೆಟ್ಟಿಗೆ ಹಾಗೂ ಮತ ಪತ್ರಗಳೊಂದಿಗೆ ಆಯಾಯ ಮತಗಟ್ಟೆಗೆ ತಲುಪಿದ್ದಾರೆ ಎಂದರು.

ನಾಲ್ಕು ತಾಲ್ಲೂಕುಗಳಲ್ಲಿ ಚುನಾವಣೆ ನಡೆಯುವ 1470 ಸದಸ್ಯ ಸ್ಥಾನಗಳಿಗೆ 3867 ಮಂದಿ ಸ್ಪರ್ಧೆ ನಡೆಸಿದ್ದಾರೆ . ಒಟ್ಟಾರೆ 896 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದರು

ಅರಕಲಗೂಡು ತಾಲ್ಲೂಕಿನ 35 ಗ್ರಾಮ ಪಂಚಾಯಿಗಳಲ್ಲಿ 237 ಮತ ಕ್ಷೇತ್ರಗಳ 421 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 254 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಚನ್ನರಾಯಪಟ್ಟಣ ತಾಲ್ಲೂಕಿನ 40 ಗ್ರಾಮ ಪಂಚಾಯಿಗಳಲ್ಲಿ 290 ಮತ ಕ್ಷೇತ್ರಗಳ 525 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು 315 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಹಾಸನ ತಾಲ್ಲೂಕಿನ 26 ಗ್ರಾಮ ಪಂಚಾಯಿಗಳಲ್ಲಿ 178 ಮತ ಕ್ಷೇತ್ರಗಳ 325 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು 208 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಸಕಲೇಶಪುರ ತಾಲ್ಲೂಕಿನ 24 ಗ್ರಾಮ ಪಂಚಾಯಿಗಳಲ್ಲಿ 114 ಮತ ಕ್ಷೇತ್ರಗಳ 199 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು 119 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದರು.

ಮೊದಲ ಹಂತದ ಚುನಾವಣೆ ನಡೆಯುತ್ತಿರುವ ತಾಲ್ಲೂಕುಗಳಲ್ಲಿ ಒಟ್ಟು 229 ಅತೀ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ .ಅರಕಲಗೂಡು ತಾಲ್ಲೂಕಿನಲ್ಲಿ 50, ಚನ್ನರಾಯಪಟ್ಟಣದಲ್ಲಿ 76, ಹಾಸನದಲ್ಲಿ 66, ಸಕಲೇಶಪುರ ತಾಲ್ಲೂಕಿನಲ್ಲಿ 37 ಅತೀ ಸೂಕ್ಷ್ಮ ಮತಗಟ್ಟೆಗಳಿವೆ .ಈ ಎಲ್ಲಾ ಕಡೆಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.ಸೆಕ್ಟರ್ ಅಧಿಕಾರಿಗಳು ಎಲ್ಲಾ ಮತಗಟ್ಟೆಗಳಿಗೆ ಭೇಟಿ ನೀಡಿ ಚುನಾವಣಾ ಸಿಬ್ಬಂದಿ ಮತಪೆಟ್ಟಿಗೆಗಳೊಂದಿಗೆ ಸುರಕ್ಷಿತವಾಗಿ ತಲುಪಿರುವುದನ್ನು ಖಾತರಿ ಮಾಡಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಇದೇ ರೀತಿ ಡಿ. 27ರಂದು ಎರಡನೇ ಹಂತದಲ್ಲಿ ಜಿಲ್ಲೆಯ ಅರಸೀಕೆರೆ, ಹೊಳೆನರಸೀಪುರ, ಆಲೂರು, ಬೇಲೂರು ತಾಲ್ಲೂಕುಗಳ 120 ಗ್ರಾಮ ಪಂಚಾಯತ್‍ಗಳ 1468 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು 903 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದರು.

ಸರ್ಕಾರಿ ರಜೆ ಘೋಷಣೆ: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನಲೆಯಲ್ಲಿ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ಮತ ಕ್ಷೇತ್ರಗಳಲ್ಲಿ ನ ಎಲ್ಲಾ ಸರ್ಕಾರಿ, ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಸರ್ಕಾರದ ಕಚೇರಿಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತಿತರ ಎಸ್ಟಾಬ್ಲಿಷ್ಮೆಂಟ್ ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಡಿ 22ರಂದು ಕರ್ನಾಟಕ ಪಂಚಾಯಿತಿ ರಾಜ್ ನಿಯಮಗಳನ್ವಯ ವೇತನ ಸಹಿತ ರಜೆ ಘೋಷಿಸಲಾಗಿದೆ
ಈ ರಜೆಯು ತುರ್ತು ಕೆಲಸಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯವಾಗುವುದಿಲ್ಲ ಆದಾಗಿಯೂ ತುರ್ತು ಸೇವೆಗಳಡಿ ಕೆಲಸ ಮಾಡುವ ನೌಕರರಿಗೆ ಮತಚಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಅರ್ ಗಿರೀಶ್ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here