ಜಿಲ್ಲೆಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ತಡೆಗೆ ಕಠಿಣ ಕ್ರಮ ಜರುಗಿಸಿ , ಜಾಗೃತಿ ಮೂಡಿಸುವುದರ ಜೊತೆಗೆ ಹೀರು ಯಂತ್ರದ ಸೌಲಭ್ಯ ಎಲ್ಲಾ ಪ್ರದೇಶಗಳಿಗೆ ಲಭ್ಯವಾಗುವಂತೆ ವ್ಯವಸ್ಥೆ ಮಾಡಲು ನಗರ ಮತ್ತು ಗ್ರಾಮೀಣ ಸಂಸ್ಥೆಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಅಧಿಕಾರಿಗಳ ಕಚೇರಿಯಲ್ಲಿ ಇಂದು ನಡೆದ ಮ್ಯಾನುಯಲ್ ಸ್ಕ್ಯಾವೆಂಜರ್ ನಿಯೋಜನೆ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ ಕುರಿತು ಸಭೆಯಲ್ಲಿ ಮಾತನಾಡಿದ ಅವರು ಸರ್ಕಾರದ ನಿಯಮಗಳ ಅನುಷ್ಠಾನಕ್ಕೆ ಸಂಬಂಧಪಟ್ಟ ಇಲಾಖೆಗಳು ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಹೇಳಿದರು.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೈರ್ಮಲ್ಯ ರಚಿತ ಶೌಚಾಲಯಗಳನ್ನು ಪತ್ತೆಮಾಡಿ ವ್ಯವಸ್ಥಿತವಾಗಿ ಅವುಗಳ ಸ್ವಚ್ಛತೆಗೆ ಕ್ರಮ ವಹಿಸಬೇಕು ಎಂದು ಅವರು ಹೇಳಿದರು.
ಮ್ಯಾನುಯೆಲ್ ಸ್ಕ್ಯಾವೆಂಜರ್ ನಿಷೇಧ ಕಾಯ್ದೆ ಬಗ್ಗೆ ಸಾರ್ವಜನಿಕರಿಗೆ ವ್ಯಾಪಕ ಅರಿವು ಮೂಡಿಸಬೇಕು ಗ್ರಾಮೀಣ ಪ್ರದೇಶಗಳಲ್ಲಿ ಎಸ್ಟೇಟ್ ಮಾಲೀಕರು ಮಾಹಿತಿ ನೀಡಬೇಕು ಎಂದರು.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಹಾಯವಾಣಿ ಪ್ರಾರಂಭಿಸಬೇಕು ಪೌರ ಕಾರ್ಮಿಕರು ಹಾಗೂ ಎಲ್ಲಾ ರೀತಿಯ ಸ್ವಚ್ಛತಾ ಕೆಲಸಗಾರರಿಗೆ ಆರೋಗ್ಯ ತಪಾಸಣೆ ಹಾಗೂ ಕೋರ್ಟ್ ತಪಾಸಣೆ ಮಾಡಿಸಿ ಯಾರೊಬ್ಬರೂ ಶೌಚ ಗುಂಡಿಯೊಳಗೆ ಇಳಿಯದಂತೆ ನಿರ್ದೇಶನ ನೀಡಿ ಎಂದು ಜಿಲ್ಲಾಧಿಕಾರಿ ತಿಳಿಸಿದರು
ಮ್ಯಾನುಯೆಲ್ ಸ್ಕ್ಯಾವೆಂಜರ್ ಪದ್ಧತಿಯಲ್ಲಿ ಪ್ರೇರೇಪಿಸುವವರು ವಿರುದ್ಧ ಕ್ರಿಮಿನಲ್ ಕೇಸ್ ಅವರಿಗೆ ಪರಿಹಾರ ನೀಡಿ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿಎ ಪರಮೇಶ್ ಅವರು ಮಾತನಾಡಿ ಮ್ಯಾನುಯೆಲ್ ಸ್ಕ್ಯಾವೆಂಜಿಂಗ್ ಮಾಡಿಸಿದ ಎಸ್ಟೇಟ್ ಮಾಲೀಕರ ವಿರುದ್ಧ ಕ್ರಮ ಜರುಗಿಸಿ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಅವರಿಂದಲೇ ಪರಿಹಾರ ಬರಿಸಬೇಕು ಈ ಸಂಬಂಧ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಬೇಕು ಎಂದು ಎಚ್ಚರಿಕೆ ನೀಡಿದರು.
ಪೌರಕಾರ್ಮಿಕರನ್ನು ಕಾಯಂ ಮಾಡುವ ಸಂದರ್ಭದಲ್ಲಿ ಕೆಲವರನ್ನು ಕೈಬಿಟ್ಟು ಹೋಗಿದ್ದಾರೆ ಮಾನವೀಯತೆ ಹಾಗೂ ಸೇವಾ ಅನುಭವದ ಆಧಾರದಲ್ಲಿ ಅವರುಗಳನ್ನು ಕಾಯಂಗೊಳಿಸಬೇಕು ಎಂದು ಸಮಿತಿ ಸದಸ್ಯರಾದ ಸೋಮಶೇಖರ್ ಹಾಗೂ ಅವರು ಮನವಿ ಮಾಡಿದರು.
ಅಪರ ಜಿಲ್ಲಾಧಿಕಾರಿ ಕವಿತಾ ರಾಜರಾಮ್ ಉಪವಿಭಾಗಾಧಿಕಾರಿ ಬಿಎ ಜಗದೀಶ್ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಗಳಾದ ಶ್ರೀಧರ್ ಮತ್ತಿತರರು ಹಾಜರಿದ್ದರು