ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಹಾಸನದ ಅರಳಿಕಟ್ಟೆ ವೃತ್ತದಲ್ಲಿ ನಡೆದಿದೆ

0

ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಹಾಸನದ ಅರಳಿಕಟ್ಟೆ ವೃತ್ತದಲ್ಲಿ ನಡೆದಿದೆ

ಕೋಲೆಯಾದ ಯುವಕ 25 ವರ್ಷದ ಹಾಸನದ ರಂಗೋಲಿ ಗುಂಡಿ ನಿವಾಸಿ ಎಂದು ಗುರುತಿಸಲಾಗಿದೆ. ಸಂಜೆ ಸಮಯದಲ್ಲಿ ದುಷ್ಕರ್ಮಿಗಳು, ಯುವಕನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿ, ಘಟನಾ ಸ್ಥಳದಿಂದ ಪರಾರಿಯಾಗಿದ್ದಾರೆ.

ಕೊಲೆಗೆ ಹಳೆ ವೈಷಮ್ಯ ಕಾರಣವಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ನಗರ ಠಾಣಾ ಪೊಲೀಸರು ಭೇಟಿ ನೀಡಿದ್ದು ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ಮೃತದೇಹವನ್ನು ಹಾಸನದ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಈ ಸಂಬಂಧ ಹಾಸನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here