ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯೋಧರೊಬ್ಬರು ಚಿಕಿತ್ಸೆ ಫಲಿಸದೆ ಹುತಾತ್ಮ

0

ಹಾಸನ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯೋಧರೊಬ್ಬರು ಚಿಕಿತ್ಸೆ ಫಲಿಸದೆ ಹುತಾತ್ಮರಾದ ಘಟನೆ ಹಾಸನ ನಗರದಲ್ಲಿ ನಡೆದಿದೆ.

ಸಂಜಯ್ (22) ಮೃತ ಯೋಧ. ಸಂಜಯ್‌ ಕಾಶ್ಮೀರದಲ್ಲಿ ರಾಷ್ಟ್ರೀಯ ರೈಫಲ್ಸ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ರಜೆಯ ಮೇರೆಗೆ ಊರಿಗೆ ಬಂದಿದ್ದರು. ಹೊನ್ನೇನಹಳ್ಳಿ ಗ್ರಾಮದ ಸಂಜಯ್, ಹಾಸನದ ದಾಸರಕೊಪ್ಪಲಿನಲ್ಲಿ ನೆಲೆಸಿದ್ದರು.

ಮೂರು ದಿನಗಳ ಹಿಂದೆ ಹಾಸನದ ಎಂ.ಜಿ. ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಯೋಧ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಹುತಾತ್ಮರಾಗಿದ್ದಾರೆ. ಘಟನೆಯಿಂದ ಪೋಷಕರು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

LEAVE A REPLY

Please enter your comment!
Please enter your name here