ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಎಂ. ಶಂಕರ್

0

ಕರ್ನಾಟಕ ವಿಧಾನ ಪರಿಷತ್ ಹಾಸನ ಜಿಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹಾಸನ ಜಿಲ್ಲೆಯಲ್ಲಿಂದು ಕಾಂಗ್ರೆಸ್ ಪಕ್ಷದಿಂದ ಎಂ. ಶಂಕರ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು ಮಧ್ಯಾಹ್ನ 1.05 ರಿಂದ 1.25ರ ನಡುವೆ ಜಿಲ್ಲಾ ಚುನಾವಣಾಧಿಕಾರಿ ಆರ್.ಗಿರೀಶ್ ಅವರಿಗೆ 2 ಪ್ರತ್ಯೇಕ ನಾಮಪತ್ರ ಗಳನ್ನು ಸಲ್ಲಿಸಿದರು.

Advertisements

ಇದೇ ಸಂಧರ್ಭದಲ್ಲಿ ಡಿ.ಕೆ. ಸುರೇಶ್, ದೇವನೂರು ಮಂಜುನಾಥ್, ಸಣ್ಣಸ್ವಾಮಿ, ಚತ್ಕಳ್ಳಿ, ಎರಡನೇ ನಾಮಪತ್ರ ಸಲ್ಲಿಕೆಯಲ್ಲಿ ಬಾಗೂರು ಮಂಜೇಗೌಡ, ಮಾಜಿ ಶಾಸಕರಾದ ಪುಟ್ಟೇಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಪಟೇಲ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಗೋಪಾಲಸ್ವಾಮಿ ಪಾಲ್ಗೊಂಡಿದ್ದರು.

ನಾಮಪತ್ರ ಸ್ವೀಕರಿಸಿದ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್.ಗಿರೀಶ್ ಪ್ರತಿಜ್ಞಾ ವಿಧಿ ಬೋಧಿಸಿದರು.

LEAVE A REPLY

Please enter your comment!
Please enter your name here