ಹಾಸನ : ನಗರಸಭೆ ಸಾಮಾನ್ಯ ಸಭೆಯಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ಅವರಿಗೆ ವಿದ್ಯುತ್ ಶಾಕ್ ಹೊಡೆದಿದೆ. ನಗರಸಭೆ ಕುವೆಂಪು ಸಭಾಂಗಣದಲ್ಲಿ ಸೋಮವಾರ ನಡೆಯುತ್ತಿದ್ದ ಸಾಮಾನ್ಯ ಸಭೆಯಲ್ಲಿ ನಗರಸಭೆ ಅಧ್ಯಕ್ಷ ಮೋಹನ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಈ ಘಟನೆ ನಡೆದಿದ್ದು, ಶಾಸಕರಿಗೆ ವಿದ್ಯುತ್ ಶಾಕ್ ಹೊಡೆಯುತ್ತಲೇ ವಿದ್ಯುತ್ ಕೂಡ ಹೋಗಿದೆ. ಸಭೆಯಲ್ಲಿ ಶಾಸಕ ಎಚ್.ಪಿ.ಸ್ವರೂಪ್‌ಪ್ರಕಾಶ್ ಭಾಗಿಯಾಗಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಈ ಘಟನೆ ನಡೆದಿದ್ದು ಮಾತನಾಡುವ ವೇಳೆ ಎದುರು ಇದ್ದ ಮೈಕ್ ಗೆ ಕೈ ತಾಗಿದೆ ಈ ವೇಳೆ ವಿದ್ಯುತ್ ಶಾಕ್ ಹೊಡೆದಿದ್ದು ತಕ್ಷಣವೇ ಇಡೀ ಸಭೆಯಲ್ಲಿ ವಿದ್ಯುತ್ ಕಡಿತ ವಾಗಿದೆ. ನಂತರ ಜನರೇಟರ್ ಮೂಲಕ ಸಭೆ ಮುಂದುವರೆಸಲಾಯಿತು.