ಶಿಕ್ಷಕರ ದಿನದ ಪ್ರಯುಕ್ತ ಆಕರ್ಷಕ ಮೆರವಣಿಗೆ, ಡಿಸಿ ಚಾಲನೆ

0
https://www.youtube.com/watch?v=yF8QSnsxvHo&ab_channel=HassanNews

ಹಾಸನ: ಸರ್ವಪಲ್ಲಿ ಡಾ. ರಾದಕೃಷ್ಣನ್ ದಿನಾಚರಣೆಯ ಅಂಗವಾಗಿ ನಗರದ ಮಹಾವೀರ ವೃತ್ತದ ಬಳಿ ಇರುವ ಕ್ಷೇತ್ರ ಶಿಕ್ಷಣ ಇಲಾಖೆ ಕಛೇರಿ ಆವರಣದಿಂದ ಶ್ರೀ ಆದಿಚುಂಚನಗಿರಿ ಶಾಖಾ ಮಠದವರೆಗೂ ಬೆಳ್ಳಿರಥದಲ್ಲಿ ಸಾಗಿದ ಆಕರ್ಷಕ ಮೆರವಣಿಗೆಗೆ ಜಿಲ್ಲಾಧಿಕಾರಿ ಸತ್ಯಭಾಮ ಮತ್ತು ಜಿಲ್ಲಾ ಪಂಚಾಯತ್ ಮುಖ್ಯಕಾರ‍್ಯನಿರ್ವಹಣಾಧಿಕಾರಿ ಪೂರ್ಣಿಮಾ ಅವರು ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಚಾಲನೆ ನೀಡಿದರು.

ಮೆರವಣಿಗೆಯಲ್ಲಿ ಯುವತಿಯರಿಂದ ದೇವರ ಕುಣಿತ, ಶಾಲೆಯ ಬ್ಯಾಂಡ್ ನ್ನು ಬಿಳಿಯ ಸಮವಸ್ತ್ರ ಧರಿಸಿದ ವಿದ್ಯಾರ್ಥಿಗಳು ನಡೆಸಿದರೇ, ಡೋಲು ಕುಣಿತ ಸೇರಿದಂತೆ ವಿವಿಧ ಕಲಾತಂಡಗಳು ಆಕರ್ಷಿಸಿದವು. ಸರ್ವಪಲ್ಲಿ ಡಾ. ರಾದಕೃಷ್ಣನ್ ಮತ್ತು ಸಾವಿತ್ರಿ ಬಾಪುಲೆ ಭಾವಚಿತ್ರದೊಂದಿಗೆ ಬೆಳ್ಳಿ ರಥದ ಮೂಲಕ ಕಾರ್ಯಕ್ರಮ ನಡೆಯುವ ಶ್ರೀ ಆದಿಚುಂಚನಗಿರಿ ಶಾಖಾ ಮಠಕ್ಕೆ ಕರೆತರಲಾಯಿತು.

ಇದೆ ವೇಳೆ ಜಿಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಬಿ.ಎಲ್. ಚಂದ್ರಪ್ಪ, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಣ್ಣಪ್ಪ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಲ್. ಚಕ್ರಪಾಣಿ, ಪದನಿಮಿತ್ತ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಕೆ. ಪುಷ್ಪಲತಾ, ಶಾಲಾ ಶಿಕ್ಷಣ ಇಲಾಖೆ ಆಡಳಿತದ ಉಪನಿರ್ದೇಶಕ ಎಸ್.ಟಿ. ಜವರೇಗೌಡ, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎನ್. ಮಂಜೂಳಾ, ಜಿಲ್ಲಾ ಪ್ರಾಥಮಿಕ ಶಾಲಾ ಬಡ್ತಿ ಮಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎನ್. ಶಾಂತರಾಜು, ಜಿಲ್ಲಾ ಪರಿಶಿಷ್ಟ ಜಾತಿ ಪಂಗಡ ಪ್ರಾಥಮಿಕ ಶಾಲಾ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಂಪತ್, ಜಿಲ್ಲಾ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಬಿ.ಈ. ಶಿವರಾಮೇಗೌಡ, ಬಿ.ಎ. ಲೋಕೇಶ್, ಚಂದ್ರಶೇಖರ್, ಎ.ಜೆ. ವೆಂಕಟೇಶ್, ಗುಡಗನಹಳ್ಳಿ ಮಂಜುನಾಥ್, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ನಾಯಕಹಳ್ಳಿ ಮಂಜೇಗೌಡ, ರಮೇಶ್ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here