ಹಾಸನ : ಸಂವಿಧಾನ ನಮಗೆ ಹಕ್ಕುಗಳನ್ನುನಿಡುವುದರ ಜೊತೆಗೆ ಕರ್ತವ್ಯವನ್ನು ನೀಡಿದೆ ಅದನ್ನು ಪಾಲಿಸಬೇಕು ಎಂದು ಪ್ರಭಾರ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ರವೀಂದ್ರ ಹೆಗಡೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಸಂವಿಧಾನ ದಿನ ಅಂಗವಾಗಿ ಏರ್ಪಡಿಸಲಾಗಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ಸಂವಿಧಾನವೇ ನಮ್ಮ ದೇಶದ ದೊಡ್ಡ ಕಾನೂನು ಹಾಗೂ ನಮ್ಮ ದೇಶದಲ್ಲಿ ಪ್ರತಿಯೊಂದು ಕಾನೂನುಗಳು ನಮ್ಮ ಸಂವಿಧಾನದ ಅಡಿಯಲ್ಲೇ ಬರಬೇಕು ಎಂದರು.
ಜಿಲ್ಲಾಧಿಕಾರಿ ಆರ್ ಗಿರೀಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂವಿಧಾನ ನಮ್ಮ ದೇಶದ ಧರ್ಮಗ್ರಂಥ, ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ ಸ್ವಾತಂತ್ರ್ಯ ನೀಡಿದೆ ಹಾಗೂ ಸಂವಿಧಾನ ನಮ್ಮ ದೇಶದ ಉನ್ನತ ಕಾನೂನು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಿ.ಕೆ ಬಸವರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್, ಅಪರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ನಂದಿನಿ,ವಕೀಲರ ಸಂಘದ ಅಧ್ಯಕ್ಷರಾದ ಜೆ.ಪಿ ಶೇಖರ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.