ಸ್ವನಿಧಿ ಯೋಜನೆಯಡಿ ಸಾಲ ಸೌಲಭ್ಯ ಒದಗಿಸಲು ಸೂಚನೆ

0

ಸ್ವನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ನೀಡಲು ಬ್ಯಾಂಕ್ ಗಳಿಗೆ ಹೆಚ್ಚುಬಾರಿ ಅಲೆದಾಡಿಸದೆ ಶೀಘ್ರ ವಿತರಣೆಗೆ ಕ್ರಮ ವಹಿಸುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಸೂಚಿಸಿದರು.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ
ಸಭೆ ನಡೆಸಿದ ಅವರು ನಿರ್ದೇಶನ ನೀಡಿದರು.

ವೀಡಿಯೋ ಸಂವಾದದ ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ಆರ್.ಗಿರೀಶ್ ಸ್ವನಿಧಿ ಯೋಜನೆಯಡಿಯಲ್ಲಿ ಬೀದಿಬದಿ ವ್ಯಾಪಾರಿಗಳು ತಮ್ಮ ತಾಲ್ಲೂಕಿನ ನಗರ ಸ್ಥಳೀಯ ಸಂಸ್ಥೆ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಿ ಸಾಲ ಸೌಲಭ್ಯವನ್ನು ಪಡೆದು ಕೊಳ್ಳುವುದರ ಬಗ್ಗೆ ಬೀದಿ ಬದಿ ವ್ಯಾಪಾರಿಗಳಿಗೆ ಮಾಹಿತಿ ನೀಡಿ ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ ಪರಮೇಶ್, ಜಿಲ್ಲಾ ವ್ಯವಸ್ಥಾಪಕರು ಮತ್ತು ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ನಾರಾಯಣಮೂರ್ತಿ ಕೌಶಲ್ಯ ಅಭಿವೃದ್ಧಿ ಇಲಾಖೆ ಕೋಮಲ ಎ.ಜೆ ಹಾಗೂ ಜಿಲ್ಲಾ ಕೌಶಲ್ಯ ಇಲಾಖೆ ವ್ಯವಸ್ಥಾಪಕರು ಡಾ. ರಾಜಶೇಖರ್ ಕನ್ನಾಳ, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ರೇವತಿ, ಇನ್ನಿತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here