ಹಾಸನದಲ್ಲಿ ಪೊಲೀಸ್ ಸಿಬ್ಬಂದಿ ಸಭೆ ನಡೆಸಿದ ದಕ್ಷಿಣ ವಲಯ ಐಜಿಪಿ ಡಾ.ಬೋರಲಿಂಗಯ್ಯ

0

ಅಪರಾಧ ತಡೆಯಲು ಅಪರಾಧ ತನಿಖಾ ವ್ಯವಸ್ಥೆ ಬದಲಾವಣೆ ಗುರಿ

ಹಾಸನ: ಅಪರಾಧ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್‌ ತನಿಖಾ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಅತಿ ಮುಖ್ಯವಾಗಿದೆ ಎಂದು ದಕ್ಷಿಣ ವಲಯ ಐಜಿಪಿ ಡಾ.ಬೋರಲಿಂಗಯ್ಯ ತಿಳಿಸಿದರು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಕಚೇರಿಯಲ್ಲಿ ಭಾನುವಾರ ಪೊಲೀಸ್ ಸಿಬ್ಬಂದಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಹಾಸನ ಜಿಲ್ಲೆ ಸೂಕ್ಷ್ಮ ಪ್ರದೇಶವಾಗಿದ್ದು, ಇತ್ತೀಚಿಗೆ ಚನ್ನರಾಯಪಟ್ಟಣದಲ್ಲಿ ನಡೆದ ರೌಡಿ ಕೊಲೆ ಹಾಗೂ ಕೆಲ ದಿನದ ಹಿಂದೆ ಹಾಸನದಲ್ಲಿ ನಡೆದ ಉದ್ಯಮಿ ಕೊಲೆ ಪ್ರಕರಣ ಸಂಬಂಧ ಇಲಾಖೆಯಿಂದ ಮಾಹಿತಿ ಹಾಗೂ ಅಗತ್ಯ ಸೂಚನೆಗಳನ್ನು ನೀಡುವ ಹಿಟ್ಟಿನಲ್ಲಿ ಭೇಟಿ ನೀಡಲಾಗಿದೆ ಎಂದರು.

ಸಂದರ್ಭದಲ್ಲಿ ಪೊಲೀಸ್ ಇಲಾಖೆಯಲ್ಲಿ ಕಾಲಕ್ಕೆ ತಕ್ಕಂತೆ ತನಿಖೆ, ಸಾರ್ವಜನಿಕರೊಂದಿಗೆ ಯಾವ ರೀತಿ ನಡೆದುಕೊಳ್ಳಬೇಕು ಹಾಗೂ ದೂರುಗಳನ್ನು ಸ್ವೀಕರಿಸುವಾಗ ಇಲಾಖೆಯಿಂದ ಯಾವರೀತಿ ಪರಾಮರ್ಶೆ ಮಾಡಬೇಕು ಎಂಬುದರ ಬಗ್ಗೆ ಅಗತ್ಯ ಮಾಹಿತಿ ಒದಗಿಸಲಾಗಿದೆ ಎಂದು ತಿಳಿಸಿದರು.

ಬೀಟ್ ವ್ಯವಸ್ಥೆಯಲ್ಲಿ ಸಹ ಹೆಚ್ಚು ಪರಿಣಾಮಕಾರಿಯಾಗಿ ಮಾಹಿತಿಯನ್ನು ಕಲೆ ಹಾಕಬೇಕಿದ್ದು, ಇದರಿಂದಲೂ ಹೆಚ್ಚು ನೆರವಾಗಲಿದೆ. ಸಣ್ಣಪುಟ್ಟ ಘಟನೆಗಳು ನಡೆದಾಗ ಅದನ್ನು ಗಂಭೀರವಾಗಿ ಪರಿಗಣಿಸಿ, ಇಲಾಖೆಗೆ ಪೊಲೀಸ್ ಇಲಾಖೆಯಿಂದ ఆ ಸಂದರ್ಭದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಂಡರೆ, ದೊಡ್ಡ ಪ್ರಕರಣಗಳನ್ನು ತಡೆಯಬಹುದಾಗಿದೆ ಎಂದು ಸಲಹೆ ನೀಡಿದರು. 107 ಹಾಗೂ ಜಿಲ್ಲೆಯಲ್ಲಿ ರೌಡಿಸಂ ಹತೋಟಿಗೆ ಎಲ್ಲ ಕ್ರಮಗಳನ್ನು 110 ಸಿಆರ್ ಡಿ ಅಡಿ ಪ್ರಕರಣದಲ್ಲಿ ಭಾಗಿಯಾದವರನ್ನು ರೌಡಿಸ 25ಸಾವಿರದಿಂದ ಲಕ್ಷದವರೆಗೆ ಬಾಂಡ್ ಬರೆಸಿಕೊಂಡು ಅಪರಾಧ ಪ್ರಕರಣಗಳನ್ನು ನಿಯಂತ್ರಿಸಬಹುದಾಗಿದೆ. ಇದಕ್ಕೂ ಮೀರಿ ಹೆಚ್ಚಿನ ಕಾನೂನು ಉಲ್ಲಂಘನೆ ಮಾಡಿದಲ್ಲಿ ಗಡಿಪಾರು ಮತ್ತು ಗೂಂಡಾ ಕಾಯ್ದೆ ಅಡಿ ಪ್ರಕರಣ ದಾಖಲಿಸುವ ಕುರಿತು ಸೂಚನೆಗಳನ್ನು ನೀಡಲಾಗಿದೆ ಎಂದರು.

ಕಾನೂನು ವ್ಯವಸ್ಥೆಗೆ ಧಕ್ಕೆ ತರುವ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನಿನ ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ ಇದ್ದರು.

LEAVE A REPLY

Please enter your comment!
Please enter your name here