ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ –75 ರ ಮೇಲ್ಸೇತುವೆಯಲ್ಲಿ ಕಾರು ಉರುಳಿ ಬಿದ್ದು ಬೆಂಗಳೂರಿನ ಧೀರಜ್ (18) ಎಂಬುವವರು ಮೃತಪಟ್ಟಿದ್ದಾರೆ.

0

ಕಾರಿನಲ್ಲಿ ಬೆಂಗಳೂರಿನಿಂದ ಹಾಸನಕ್ಕೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅತಿಯಾದ ವೇಗದಲ್ಲಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆಯಲ್ಲಿ ಉರುಳಿ ಬಿದ್ದಿದೆ. ಕಾರಿನಲ್ಲಿದ್ದ ಜಗದೀಶ್, ನಳಿನಾಕ್ಷಿ, ದುಷ್ಯಂತ್‌ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸ ಲಾಗಿದೆ. ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದರೆ, ಇನ್ನೂ ಹೆಚ್ಚಿನ ಅನಾಹುತ ಸಂಭವಿಸುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ಚನ್ನರಾಯಪಟ್ಟಣದ ಸಂಚಾರ ಠಾಣೆಯ ಪೊಲೀಸರು ಪರಿಶೀಲಿಸಿದ್ದಾರೆ.

LEAVE A REPLY

Please enter your comment!
Please enter your name here