ಹಾಸನ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ವೀಣಾ ಅಚ್ಚಯ್ಯನವರಿಗೆ ಸನ್ಮಾನ

0

ಹಾಸನ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದಿಂದ ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯನವರಿಗೆ ಹೃದಯಸ್ಪರ್ಶಿ ಸನ್ಮಾನ ಮಾಡಲಾಯಿತು . ಹಾಸನ ಜಿಲ್ಲಾ ಕಾಂಗ್ರೆಸ್ ಮತ್ತು ಜಿಲ್ಲಾ ಮಹಿಳಾ ಕಾಂಗ್ರೆಸ್ ಆಯೋಜಿಸಿದ
ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 103 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಡಾ ಪುಷ್ಪಾ ಅಮರ್ ನಾಥ್ .ಜಿಲ್ಲಾ ಮಹಿಳಾ ಕಾಂಗ್ರೆಸ್ ಪಧಾದಿಕಾರಿಗಳು ಶಾಲು ಹೊದಿಸಿ ಮೈಸೂರು ಪೇಟ ತೊಡಿಸಿ ವೀಣಾ ಅಚ್ಚಯ್ಯರವರನ್ನು ಭಾವ ಪೂರ್ಣವಾಗಿ ಸನ್ಮಾನಿಸಿದರು .ನಂತರ ಮಾತನಾಡಿದ ಡಾ ಪುಷ್ಪ ಅಮರ್ ನಾಥ್ ಕಳೆದ ಮೂರು ದಶಕಗಳಿಂದ ಕಾಂಗ್ರೆಸ್ ಪಕ್ಷ ಕ್ಕೆ ವೀಣಾ ಅಚ್ಚಯ್ಯನವರು ನಿಸ್ವಾರ್ಥ ಸೇವೆ ಸಲ್ಲಿಸಿದ್ದು ಅವರ ದಕ್ಷತೆ ಮತ್ತು ಪ್ರಾಮಾಣಿಕತೆ ರಾಜ್ಯದ ಎಲ್ಲಾ ಮಹಿಳೆಯರಿಗೆ ಮಾದರಿಯಾಗಿದೆ ಎಂದು ಹೇಳಿದರು .ದೇಶದ ಧೀಮಂತ ನಾಯಕಿ ಇಂದಿರಾ ಗಾಂಧಿಯವರ ಆದರ್ಶಗಳೊಂದಿಗೆ ನಡೆಯುತ್ತಿರುವ ವೀಣಾ ರವರ ಬದ್ದತೆಗಳು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರೇರಣೆಯಾಗಿದೆ ಎಂದು ಬಣ್ಣಿಸಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ವೀಣಾ ಅಚ್ಚಯ್ಯನವರು ಪರಾವಲಂಬಿ ಆಗಿದ್ದ ದೇಶವನ್ನು ಸ್ವಾವಲಂಬಿ ದೇಶವನ್ನಾಗಿಸಿದ ಕೀರ್ತಿ ಇಂದಿರಾ ಗಾಂಧಿಯವರಿಗೆ ಸಲ್ಲುತ್ತದೆ .ಅವರ ಆದರ್ಶಗಳನ್ನು ಪ್ರತಿಯೊಬ್ಬ ಭಾರತೀಯ ನಾರಿಯರು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಹಾಸನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ,ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಮುಖಂಡರುಗಳು ,ಪಧಾದಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಿದ್ದರು

LEAVE A REPLY

Please enter your comment!
Please enter your name here