ಹೆಚ್.ಎ.ಎಲ್ ನಲ್ಲಿ ಅಪ್ರೆಂಟೀಸ್ ತರಬೇತಿಗಾಗಿ ಅರ್ಜಿ ಆಹ್ವಾನ

0

ಹಿಂದೂಸ್ತಾನ್ ಏರೋನ್ಯಾಟಿಕ್ಸ್ ಲಿಮಿಟೆಡ್, ಬೆಂಗಳೂರು ರವರು ಅಪ್ರೆಂಟೀಸ್ (ಶಿಶಿಕ್ಷು) ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿರುತ್ತಾರೆ.
ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಯೊಂದಿಗೆ ಐ.ಟಿ.ಐ ನಲ್ಲಿ ಫಿಟ್ಟರ್, ಮಿಷನಿಸ್ಟ್, ಟರ್ನರ್, ವೆಲ್ಡರ್, ಎಲೆಕ್ಟ್ರಿಷಿಯನ್, ಶೀಟ್ ಮೆಟಲ್ ವರ್ಕರ್, ಫೌಂಡ್ರಿಮೆನ್ ಹಾಗೂ ಕೊಪಾ ಟ್ರೇಡ್‍ನಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ.
ವಯೋಮಿತಿ 18 ರಿಂದ 30 ವರ್ಷಗಳು. ತರಬೇತಿ ಅವಧಿಯಲ್ಲಿ ಸರ್ಕಾರಿ ನಿಯಮಾನುಸಾರ ಸ್ಟೈಫಂಡ್ ನೀಡಲಾಗುತ್ತದೆ. ಅರ್ಜಿ ನಮೂನೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಪಡೆಯಬಹುದು. ಅರ್ಜಿ ಸಲ್ಲಿಸಲು ನ.10 ಕೊನೆಯ ದಿನಾಂಕವಾಗಿರುತ್ತದೆ.
ನಿಗದಿತ ಅರ್ಜಿ ನಮೂನೆಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಐ.ಟಿ.ಐ ಅಂಕಪಟ್ಟಿ, ಪ.ಜಾತಿ/ಪ.ಪಂಗಡ/ಓ.ಬಿ.ಸಿ/ಅಂಗವಿಕಲ ಸರ್ಟಿಫೀಕೆಟ್/ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಒಂದು ಪಾಸ್ ಪೋರ್ಟ್ ಭಾವಚಿತ್ರದೊಂದಿಗೆ ನಿಗದಿ ಪಡಿಸಿದ ದಿನಾಂಕದೊಳಗೆ ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಯವರನ್ನು ಖುದ್ದಾಗಿ ಕಚೇರಿ ವೇಳೆಲ್ಲಿ ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ: 08172-296374 ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

LEAVE A REPLY

Please enter your comment!
Please enter your name here