ಜಿಲ್ಲಾಧಿಕಾರಿ ಆರ್ .ಗಿರೀಶ್ ಅವರಿಂದು ಹಾಸನ ತಾಲ್ಲೂಕಿನ ಚಿಗಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಅಕ್ರಮ ಗಣಿಗಾರಿಕೆ ಕುರಿತು ಪರಿಶೀಲನೆ ನಡೆಸಿದರು.
ಗ್ರಾಮಸ್ಥರು ಸಲ್ಲಿಸಿದ ದೂರಿನ ಹಿನ್ನಲೆಯಲ್ಲಿ ಅಧಿಕಾರಿಗಳ ತಂಡದೊಂದಿಗೆ ಚಿಗಳ್ಳಿಗೆ ಭೇಟಿ ನೀಡಿದ ಅವರು ಸರ್ವೆ ನಂ. 38 ರಲ್ಲಿ ನಡೆಸುತ್ತಿರುವ ಕಲ್ಲು ಗಣಿಗಾರಿಕೆ ಪರಿಶೀಲಿಸಿದರು.
ಇದೇ ವೇಳೆ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಸ್ಥಳೀಯರ ಅಭಿಪ್ರಾಯಗಳನ್ನು ಆಲಿಸಿದರು.
ಉಪ ವಿಭಾಗಾಧಿಕಾರಿ ಬಿ.ಎ.ಜಗದೀಶ್, ಭೂದಾಖಲೆಗಳ ಉಪ ನಿರ್ದೇಶಕರಾದ ಹೇಮಲತಾ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸೋಮಶೇಖರ್, ತಹಶಿಲ್ದಾರ್ ಶಿವಶಂಕರಪ್ಪ ಮತ್ತಿತರರು ಹಾಜರಿದ್ದರು.