ಹಾಸನ ಜಿಲ್ಲೆಯಲ್ಲಿ ಕೆಲವು ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರದಲ್ಲಿ ಪರೀಕ್ಷೆ ನಡೆಸುತ್ತಿರುವುದು ಗಮನಕ್ಕೆ ಬಂದಿದ್ದು ತಂಡ ರಚಿಸಿ ವರದಿ ಪಡೆದು ಈಗಾಗಲೇ ನೋಟೀಸು ನೀಡಿ ದಂಡ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.
ಹಳೆ ಈದ್ಗಾ ಮೈದಾನದಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳ ನೆರವಿನಿಂದ ಸ್ಥಾಪನೆಯಾಗಿರುವ 100 ಹಾಸಿಗೆ ಉಳ್ಳ ಕೋವಿಡ್ ಸೆಂಟರನ್ನು ಉದ್ಘಾಟನೆ ಮಾಡಿ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಹಣ ಪಡೆಯುತ್ತಿದ್ದಾರೆ ಎಂಬುದರ ಬಗ್ಗೆ ಅಧಿಕಾರಿಗಳ ತಂಡವನ್ನು ನಿಯೋಜಿಸಲಾಗಿದ್ದು ಬಿಲ್ ಆಡಿಟ್ ನಡೆಸಿ ಇನ್ನೆರೆಡು ದಿನದಲ್ಲಿ ಅಂತಹವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು
ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕುವಾರು ಕೋವಿಡ್ ಕೇರ್ ಸೆಂಟರ್ ಗಳನ್ನು ಈಗಾಗಲೇ ಪ್ರಾರಂಭಿಸಲಾಗಿದೆ ಎಂದರು
ಸಾರ್ವಜನಿಕರಲ್ಲಿ ಯಾವುದೇ ರೀತಿಯ ಕೋವಿಡ್ ಲಕ್ಷಣಗಳು ಕಂಡುಬಂದರೆ ನೇರವಾಗಿ ಸೆಂಟರ್‍ಗಳ ಸಂಪರ್ಕಿಸಿ ತಪಾಸಣೆಗಳ ಮಾಡಿಸುವುದು ಉತ್ತಮ ಎಂದು ಜಿಲ್ಲಾಧಿಕಾರಿ ಆರ್ ಗಿರೀಶ್ ತಿಳಿಸಿದರು.
ಅದೇ ಖಾಸಗಿ ಸಂಘ ಸಂಸ್ಥೆಗಳೂ ಸಹ ಸೆಂಟರ್ ಗಳನ್ನು ಪ್ರಾರಂಭ ಮಾಡುತ್ತಿರುವುದು ಅಭಿನಾದರ್ಹ ಎಂದ ಅವರು ಕೋವಿಡ್ ಸೆಂಟರ್ ಗಳಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಔಷಧಿ ಜಿಲ್ಲಾಡಳಿತದ ವತಿಯಿಂದ ಒದಗಿಸಲಾಗುತ್ತದೆ ಎಂದು ತಿಳಿಸಿದರು.
ಈಗಾಗಲೇ ಸರ್ಕಾರದ ವತಿಯಿಂದ ಧರ್ಮಸ್ಥಳ ಆಯುರ್ವೇದಿಕ್ ಕಾಲೇಜಿನಲ್ಲಿ 300 ಬೆಡ್ ನ ಕೋವಿಡ್ ಕೇರ್ ಸೆಂಟರ್ ಅನ್ನು ಪ್ರಾರಂಭಿಸಲಾಗಿದೆ ಅದೇ ರೀತಿ ಹಲವು ಅದೇ ರೀತಿ ಸಂಘ-ಸಂಸ್ಥೆಗಳು ಕೋವಿಡ್ ಸೆಂಟರ್ ಪ್ರಾರಂಭಿಸುವ ಮೂಲಕ ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕು ಎಂದರು.
ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 46 ಆಮ್ಲಜನಕ ಉಳ್ಳ ಬೆಡ್ ಗಳು ಖಾಲಿ ಇವೆ. ಪ್ರತಿನಿತ್ಯ 10ರಿಂದ 11 ಕೆಎಲ್ ಆಮ್ಲಜನಕ ಹಿಮ್ಸ್ ಗೆ ಸರಬರಾಜಾಗುತ್ತದೆ ಹೆಚ್ಚುವರಿಯಾಗಿ 3 ಕೆ.ಎಲ್ ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಆದರೆ ಅನುಮೋದನೆ ಹಂತದಲ್ಲಿದೆ ಎಂದು ತಿಳಿಸಿದರು.
ಮನೆಯಲ್ಲಿ ಪ್ರತ್ಯೇಕ ಕೊಠಡಿ ಇಲ್ಲದಿದ್ದರೆ ಕೋವಿಡ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯಬಹುದು ಅಂತವರನ್ನು ಪರಿಶೀಲಿಸಿ ಸೆಂಟರ್ ಗೆ ಕರೆತರಲು ಆಶಾ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು