ಜಿಲ್ಲಾಧಿಕಾರಿ ಆರ್ .ಗಿರೀಶ್ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ ಅವರು ಇಂದು ಮೊದಲೇ ಹಂತದಲ್ಲಿ ನಡೆಯುವ ಗ್ರಾಮ ಪಂಚಾಯಿತಿ ಚುನಾವಣೆ ಸಂಭಂದ ಅರಕಲಗೂಡಿನಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯ ಮಸ್ಟರಿಂಗ್ ಕಾರ್ಯ ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನೂ ನೀಡಿದರು.

ಇದೇ ವೇಳೆ ಅವರು ಸ್ಟ್ರಾಂಗ್ ರೂಮ್ ಹಾಗೂ ಮತ ಎಣಿಕೆ ವ್ಯವಸ್ಥೆಗಳ ಬಗ್ಗೆಯೂ ಪರಿಶೀಲಿಸಿದರು.
ತಹಸೀಲ್ದಾರರಾದ ರೇಣುಕುಮಾರ್ .ಗ್ರಾಮ ಪಂಚಾಯಿತಿ ಚುನಾವಣೆ ನೀತಿ ಸಂಹಿತೆ ಜಾರಿ ಅಧಿಕಾರಿ ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು.