ಹಾಸನ ಜಿಲ್ಲೆಯಾದ್ಯಂತ ತೀವ್ರವಾಗಿ ಹರಡುತ್ತಿದ್ದು, ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಸೋಂಕಿತರಿಗೆ ಪ್ರತ್ಯೇಕವಾಗಿ ಕೋವಿಡ್ ಕೇಂದ್ರಗಳನ್ನು ಸ್ಥಾಪಿಸಲು ಹಾಗೂ ಕೊರೋನ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಅನುಕೂಲವಾಗುವಂತೆ ದಿನಾಂಕ:10,05.2021ರಂದು ಹಾಸನದ ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ಸಭೆಯಲ್ಲಿ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ರಾಜ್ಯದಲ್ಲಿ ದಿನಾಂಕ:15.05.2021ರೊಳಗೆ 2500 ವೈದ್ಯರನ್ನು ನೇಮಕಾತಿ ಮಾಡಿಕೊಳ್ಳಲಾಗುವುದೆಂದು ತಿಳಿಸಿದ್ದರು.

ಈ ನೇಮಕಾತಿ ಆದೇಶದಲ್ಲಿರುವ ವೈದ್ಯರುಗಳನ್ನು ಹಾಸನ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಹಲವಾರು ವರ್ಷಗಳಿಂದ ಖಾಲಿ ಇರುವ ಮುಖ್ಯ ವೈದ್ಯಾಧಿಕಾರಿಗಳು, ಹಿರಿಯ ವೈದ್ಯಾಧಿಕಾರಿಗಳು, ಶಸ್ತ್ರ ಚಿಕಿತ್ಸಕರು ಹಾಗೂ ಇತರೆ ಪ್ರಮುಖ ವೈದ್ಯರುಗಳ ಜಾಗಕ್ಕೆ ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿ ಎಂದು ಮಾಜಿ ಪ್ರಧಾನಿ ಹಾಗೂ ರಾಜ್ಯ ಸಭಾ ಸದಸ್ಯರು ಹೆಚ್.ಡಿ.ದೇವೇಗೌಡರು ಮುಖ್ಯಮಂತ್ರಿ ಯಡಿಯೂರಪ್ಪ ನವರಿಗೆ ಹಾಗೂ ಆರೋಗ್ಯ ಸಚಿವರು ಡಾಃ ಸುಧಾಕರ್ ರವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

