ರಾಜ್ಯಾದ್ಯಂತ ಕೊವಿದ್ ಸೋಂಕುವಿನ 2ನೇ ಅಲೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವಿಧಿಸಲಾಗಿರುವ ಎರಡು ವಾರದ ಜನತಾ ಕರ್ಪೂವಿನಿಂದ ಬಾಧಿತವಾಗಿರುವ ಕೂಲಿ ಕಾರ್ಮಿಕರಿಗೆ ಪರಿಹಾರ ಪ್ಯಾಕೇಜ್ ನೀಡಲು ಮತ್ತು ಹಾಸನ ಜಿಲ್ಲೆಯಲ್ಲಿನ ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಕಲ್ಪಿಸಲು ಮನವಿ ಮಾಡಿ ಮುಖ್ಯ ಮಂತ್ರಿ ಗಳು, ಆರೋಗ್ಯ ಸಚಿವರು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಗಳಿಗೆ ಮಾಜಿ ಪ್ರಧಾನಿ ಹಾಗೂ ರಾಜ್ಯ ಸಭಾ ಸದಸ್ಯರಾದ ಹೆಚ್.ಡಿ.ದೇವೇಗೌಡರು ಪತ್ರ ಬರೆದಿದ್ದಾರೆ.



