ವಿವಿಧ ಅಭಿವೃದ್ಧಿ ನಿಗಮಗಳ ವತಿಯಿಂದ ಗಂಗಾ ಕಲ್ಯಾಣ ಯೋಜನೆಯಡಿ ಕೊರೆದಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಆರ್ ಗಿರೀಶ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿ ಸೆಸ್ಕಾಂ ನಿಂದ ಇದುವರೆಗೆ ಎಷ್ಟು ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂಬುದರ ಬಗ್ಗೆ ವರದಿ ನೀಡುವಂತೆ ತಿಳಿಸಿದರು.
ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಅಧಿಕಾರಿಗಳು ಹೆಚ್ಚುವರಿ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುಂತೆ ತಿಳಿಸಿದರಲ್ಲದೆ, ಸಮನ್ವಯತೆಯಿಂದ ಕೆಲಸ ನಿರ್ವಹಿಸುವ ಮೂಲಕ ಸರ್ಕಾರಿ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಎಸ್.ಎಸ್.ಎಲ್.ಸಿ ಮಕ್ಕಳಿಗೆ ಆನ್‍ಲೈನ್ ತರಗತಿ ವ್ಯವಸ್ಥಿತವಾಗಿ ನಡೆಯುತ್ತಿದೆಯೇ ಹಾಗೂ ಅಕ್ಷರ ದಾಸೋಹದಲ್ಲಿ ಮಕ್ಕಳಿಗೆ ಆಹಾರ ಪದಾರ್ಥ ವಿತರಣೆ ಮತ್ತು ವಸತಿ ನಿಲಯಗಳು ಆರಂಭವಾಗಿರುವ ಕುರಿತು ಸಭೆಯಲ್ಲಿ ಜಿಲ್ಲಾಧಿಕಾರಿಯವರ ಮಾಹಿತಿ ಪಡೆದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ನಾಗರಾಜ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಂಜುನಾಥ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.